ಅತಿಶಿ ವೀಡಿಯೊ ವಿಧಿವಿಜ್ಞಾನ ಪರೀಕ್ಷೆಗೆ ಆದೇಶ
ನವದೆಹಲಿ, 08 ಜನವರಿ (ಹಿ.ಸ.) : ಆ್ಯಂಕರ್ : ದೆಹಲಿ ವಿಧಾನ ಸಭೆಯ ಚಳಿಗಾಲದ ಅಧಿವೇಶನದ ವೇಳೆ ಉಂಟಾದ ಗದ್ದಲದ ಹಿನ್ನೆಲೆಯಲ್ಲಿ, ವಿರೋಧ ಪಕ್ಷದ ನಾಯಕಿ ಅತಿಶಿ ಅವರ ವೀಡಿಯೊವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲು ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಆದೇಶಿಸಿದ್ದಾರೆ. 15 ದಿನಗಳಲ್ಲಿ ತನಿಖಾ ವರದಿ
Atishis


ನವದೆಹಲಿ, 08 ಜನವರಿ (ಹಿ.ಸ.) :

ಆ್ಯಂಕರ್ : ದೆಹಲಿ ವಿಧಾನ ಸಭೆಯ ಚಳಿಗಾಲದ ಅಧಿವೇಶನದ ವೇಳೆ ಉಂಟಾದ ಗದ್ದಲದ ಹಿನ್ನೆಲೆಯಲ್ಲಿ, ವಿರೋಧ ಪಕ್ಷದ ನಾಯಕಿ ಅತಿಶಿ ಅವರ ವೀಡಿಯೊವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲು ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಆದೇಶಿಸಿದ್ದಾರೆ. 15 ದಿನಗಳಲ್ಲಿ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಗುರು ತೇಜ್ ಬಹದ್ದೂರ್ ಕುರಿತು ಅತಿಶಿ ನೀಡಿದ ಹೇಳಿಕೆಗಳ ಬಗ್ಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಗದ್ದಲ ಎಬ್ಬಿಸಿದರು. ಕ್ಯಾಬಿನೆಟ್ ಸಚಿವ ಕಪಿಲ್ ಮಿಶ್ರಾ ಹೇಳಿಕೆಗೆ ಆಮ್ ಆದ್ಮಿ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ನಿರಂತರ ಗದ್ದಲದಿಂದ ಸದನವನ್ನು ಮೂರನೇ ಬಾರಿ ಮುಂದೂಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande