ಕರ್ನಾಟಕ ಜಾನಪದ ಅಕಾಡೆಮಿಯಿಂದ ಫೆಲೋಶಿಪ್ ಲೇಖನಗಳಿಗೆ ಅರ್ಜಿ ಆಹ್ವಾನ
ಹಾಸನ, 08 ಜನವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಜಾನಪದ ಅಕಾಡೆಮಿಯ ಫೆಲೋಶಿಪ್ ಲೇಖನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕಾಡೆಮಿ ವೆಬ್‌ಸೈಟ್‌ನಲ್ಲಿ ಸೂಚಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರ ಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ
ಕರ್ನಾಟಕ ಜಾನಪದ ಅಕಾಡೆಮಿಯಿಂದ ಫೆಲೋಶಿಪ್ ಲೇಖನಗಳಿಗೆ ಅರ್ಜಿ ಆಹ್ವಾನ


ಹಾಸನ, 08 ಜನವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ಜಾನಪದ ಅಕಾಡೆಮಿಯ ಫೆಲೋಶಿಪ್ ಲೇಖನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಕಾಡೆಮಿ ವೆಬ್‌ಸೈಟ್‌ನಲ್ಲಿ ಸೂಚಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರ ಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಒಂದೇ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿಕೊಂಡು, ಅದಕ್ಕೆ ಸಂಬಂಧಿಸಿದಂತೆ 5 ಪುಟಗಳ ಸಾರಲೇಖವನ್ನು ರಚಿಸಿ ಜನವರಿ 23ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು–560002 ಇವರಿಗೆ ಕಳುಹಿಸಿಕೊಡಬೇಕು.

ಸಾರಲೇಖಗಳ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದವರಿಗೆ ಫೆಲೋಶಿಪ್ ಕಾರ್ಯನಿರ್ವಹಿಸಲು ಅಧಿಕೃತ ಆದೇಶ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಜಾನಪದ ಅಕಾಡೆಮಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande