
ಕೋಲಾರ, 0೮ ಜನವರಿ (ಹಿ.ಸ) :
ಆ್ಯಂಕರ್ : ತಾಲೂಕಿನ ವೇಮಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ಎಸ್ಸಿ.ಎಸ್ಟಿ ಬಾಲಕಿಯರ ವಸತಿ ನಿಲಯ ಮಂಜೂರು ಮಾಡುವಂತೆ ದಮನಿತರ ಸಂಘರ್ಷ ಸಮಿತಿ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸನ್ ಅವರಿಗೆ ಗುರುವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.
ದಮನಿತರ ಸಂಘರ್ಷ ಸಮಿತಿ ರಾಜ್ಯ ಅಧ್ಯಕ್ಷ ಮೇಡಹಾಳ ಮುನಿಅಂಜನಪ್ಪ ಮಾತನಾಡಿ ವೇಮಗಲ್ ಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರಥಮ ದರ್ಜೆ ಕಾಲೇಜು ಇದ್ದು ಪ್ರತಿನಿತ್ಯ ಗ್ರಾಮೀಣ ಪ್ರದೇಶದ ವಿಧ್ಯಾರ್ಥಿಗಳು ವ್ಯಾಸಂಗಕ್ಕೆ ಬೇರೆ ಬೇರೆ ತಾಲೂಕುಗಳಿಂದ ಬಂದು ಹೋಗುತ್ತಿದ್ದಾರೆ ಇಲ್ಲಿಯೇ ಉಳಿದ ವಿಧ್ಯಾಭ್ಯಾಸ ಮಾಡಲು ಯಾವುದೇ ಹಾಸ್ಟೆಲ್ ಇಲ್ಲವಾಗಿದ್ದು ಕೂಡಲೇ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಾಲಕಿಯರ ವಸತಿ ನಿಲಯ ಮಂಜೂರು ಮಾಡುವಂತೆ ಒತ್ತಾಯಿಸಿದರು.
ವೇಮಗಲ್ ನಲ್ಲಿರುವ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವಕರು ೧೯೪ ಯುವತಿಯರು ೧೮೮ ಸೇಎ ಒಟ್ಟು ೩೮೫ ವಿಧ್ಯಾರ್ಥಿಗಳು, ಪದವಿ ಪೂರ್ವ ಕಾಲೇಜಿನಲ್ಲಿ ಬಾಲಕರು ೫೫ ಬಾಲಕಿಯರು ೧೨೨ ಒಟ್ಟು ೧೭೮ ವಿಧ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಈ ಭಾಗದಲ್ಲಿ ಹಾಸ್ಟೆಲ್ ಪ್ರಾರಂಭ ಮಾಡುವಂತೆ ದಶಕಗಳಿಂದ ಹೋರಾಟ ನಡೆಸಲಾಗುತ್ತಿದೆ. ಈಗಾಗಲೇ ಹೋಬಳಿ ಕೇಂದ್ರವಾಗಿದ್ದು ತಾಲೂಕು ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿದೆ ಎಂದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚು ಇರುವ ಈ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಇಲ್ಲವಾಗಿದೆ ಆರ್ಥಿಕ ಸಾಮರ್ಥ್ಯವಿಲ್ಲದ ಬಡ ರೈತ ಕುಟುಂಬಗಳು ಹೆಚ್ಚಾಗಿದ್ದು ಈ ಕೂಡಲೇ ಸೂಕ್ತವಾದ ಬಾಲಕಿಯರ ಹಾಸ್ಟೆಲ್ ವ್ಯವಸ್ಥೆ ಮಾಡುವಂತೆ ದಮನಿತರ ಸಂಘರ್ಷ ಸಮಿತಿ ಸದಸ್ಯರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಗೌರವ ಅಧ್ಯಕ್ಷ ಮಲ್ಲಂಡಹಳ್ಳಿ ನಾರಾಯಣಸ್ವಾಮಿ, ಮುಖಂಡರಾದ ಕದಿರೇನಹಳ್ಳಿ ಕುಮಾರ್, ಶ್ರೀನಿವಾಸ್, ಶಂಕರಪ್ಪ, ಆಂಜಿನಪ್ಪ, ಡಿ.ಎಂ ಮುನಿರಾಜು, ಬಂಗಾರಪೇಟೆ ನವೀನ್ ಕುಮಾರ್ ಮುಂತಾದವರು ಇದ್ದರು.
ಚಿತ್ರ ; ಕೋಲಾರ ತಾಲೂಕಿನ ವೇಮಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ಎಸ್ಸಿ.ಎಸ್ಟಿ ಬಾಲಕಿಯರ ವಸತಿ ನಿಲಯ ಮಂಜೂರು ಮಾಡುವಂತೆ ದಮನಿತರ ಸಂಘರ್ಷ ಸಮಿತಿ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸನ್ ಅವರಿಗೆ ಗುರುವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್