ವಿಜಯಪುರಕ್ಕೆ ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಮುಖ್ಯಮಂತ್ರಿ
ವಿಜಯಪುರ, 09 ಜನವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ ಇಂದು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸೈನಿಕ ಶಾಲೆ ಆವರಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. 11.45 ಕ್ಕೆ ಆಗಮಿಸಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ 1.25 ಕ್ಕೆ ಆಗಮಿಸಿದರು‌ ಬರೊಬ್ಬರ
Cm


ವಿಜಯಪುರ, 09 ಜನವರಿ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ ಇಂದು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸೈನಿಕ ಶಾಲೆ ಆವರಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. 11.45 ಕ್ಕೆ ಆಗಮಿಸಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ 1.25 ಕ್ಕೆ ಆಗಮಿಸಿದರು‌ ಬರೊಬ್ಬರಿ ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರನ್ನು ಸಚಿವರಾದ ಎಂ‌.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲಾಧಿಕಾರಿ, ಎಸ್ ಪಿ, ಹಾಗೂ ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು.

ಪೊಲೀಸರಿಂದ ವಂದನೆ ಸ್ವೀಕರಿಸಿದ ಮುಖ್ಯಮಂತ್ರಿ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಕ್ಕೆ ತೆರಳಿದರು.

ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಿದ್ದಾರೆ. ಬಳಿಕ ನಗರದ ಹೊರ ಭಾಗದಲ್ಲಿರುವ ಸೈಕ್ಲಿಂಗ್ ವೆಲೋಡ್ರಮ್ ಉದ್ಘಾಟನೆ ನೆರವೇರಿಸಿದ ನಂತರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಒಬ್ಬರು ಎಸ್ ಪಿ, ಒಬ್ಬರು ಎಎಸ್‌ಪಿ, 10 ಡಿವೈಎಸ್ಪಿ, 31 ಸಿಪಿಐ, 75 ಪಿಎಸ್ಐ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ‌. 92 ಎಎಸ್ಐ, 03 ಕೆಎಸ್ಆರ್ಪಿ/ಐಆರ್ಬಿ ತುಕಡಿಗಳು, 05 ಡಿಎಆರ್ ತುಕಡಿಗಳು, 04 ಎಎಸ್‌ಟಿ‌ ಟೀಮ್ ಗಳ ನಿಯೋಜನೆ ಮಾಡಲಾಗಿದೆ‌.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande