
ಬೆಂಗಳೂರು, 09 ಜನವರಿ (ಹಿ.ಸ.);
ಆ್ಯಂಕರ್:
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗ ಇಂದು ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರವಾದ “ಅಕ್ಕಪಡೆ” ಯೋಜನೆಗೆ ಸಚಿವ ಮುನಿಯಪ್ಪ ಅಧಿಕೃತ ಚಾಲನೆ ನೀಡಿದರು.
ಈ ಸಂಧರ್ಬದಲ್ಲಿ ಮಾತನಾಡಿದ ಅವರು, ಮಹಿಳೆಯರು ಹಾಗೂ ಮಕ್ಕಳಿಗೆ ಯಾವುದೇ ತುರ್ತು ಪರಿಸ್ಥಿತಿಗಳಲ್ಲಿ ಸಕಾಲದಲ್ಲಿ ನೆರವು, ರಕ್ಷಣೆ ಮತ್ತು ನ್ಯಾಯ ಒದಗಿಸುವ ಉದ್ದೇಶದಿಂದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಚಂದ್ರಕಾಂತ್ ಎಂ.ವಿ, ಎಎಸ್ಪಿ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಮುದ್ದಣ್ಣ, ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa