ಜಿ ರಾಮ್ ಜಿ ಯೋಜನೆಯಲ್ಲಿ ಗ್ರಾಮ ಪಂಚಾಯತಿಗಳಿಗೆ ಹೆಚ್ಚಿನ ಅಧಿಕಾರ : ಬಸವರಾಜ ಬೊಮ್ಮಾಯಿ
ಬೆಂಗಳೂರು, 09 ಜನವರಿ (ಹಿ.ಸ.) : ಆ್ಯಂಕರ್ : ವಿಬಿಜಿ ಜಿ ರಾಮ್ ಜಿ ಯೋಜನೆಯಡಿ ಗ್ರಾಮ ಪಂಚಾಯತಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದ್ದು, ಇದರಿಂದ ಕೂಲಿಕಾರರಿಗೆ ನೇರ ಲಾಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ “ಕಳ್ಳತನ ನಿಂತು ಹೋಗುವ ಭಯದಿಂ
BsB


ಬೆಂಗಳೂರು, 09 ಜನವರಿ (ಹಿ.ಸ.) :

ಆ್ಯಂಕರ್ : ವಿಬಿಜಿ ಜಿ ರಾಮ್ ಜಿ ಯೋಜನೆಯಡಿ ಗ್ರಾಮ ಪಂಚಾಯತಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದ್ದು, ಇದರಿಂದ ಕೂಲಿಕಾರರಿಗೆ ನೇರ ಲಾಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ “ಕಳ್ಳತನ ನಿಂತು ಹೋಗುವ ಭಯದಿಂದಲೇ” ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಅವರು ಆರೋಪಿಸಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯೋಜನೆಯಲ್ಲಿ ಕೂಲಿ ದಿನಗಳನ್ನು 100ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದ್ದು, ಇದು ಗ್ರಾಮೀಣ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದರು. ಪ್ರತಿ ಮನೆಯಲ್ಲೂ ಕೆಲಸ ಇರುವವರು–ಇಲ್ಲದವರ ಪಟ್ಟಿ ತಯಾರಿಸುವುದು, ಗ್ರಾಮಾಭಿವೃದ್ಧಿ ಯೋಜನೆ ರೂಪಿಸುವುದು, ಯೋಜನೆ ಅನುಷ್ಠಾನಗೊಳಿಸುವುದು ಹಾಗೂ ಕಾರ್ಮಿಕರಿಗೆ ಕೂಲಿ ಪಾವತಿಸುವ ಸಂಪೂರ್ಣ ಅಧಿಕಾರವನ್ನು ಗ್ರಾಮ ಪಂಚಾಯತಿಗಳಿಗೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಗ್ರಾಮ ಪಂಚಾಯತಿಗಳ ಅಧಿಕಾರ ಕಡಿತಗೊಳಿಸಲಾಗಿದೆ ಎಂದು ಆರೋಪಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ವಿಬಿಜಿ ಜಿ ರಾಮ್ ಜಿ ವಿಧೇಯಕದ ಕ್ಲಾಸ್ 16ರಲ್ಲಿ ಗ್ರಾಮ ಪಂಚಾಯತಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಹೇಳಿದರು. “ಹಾಗಾದರೆ ಕಾಂಗ್ರೆಸ್ ಏಕೆ ವಿರೋಧ ಮಾಡುತ್ತಿದೆ?” ಎಂದು ಪ್ರಶ್ನಿಸಿದರು.

ವಿಕಸಿತ ಭಾರತದ ಪರಿಕಲ್ಪನೆಯಡಿ ಗ್ರಾಮರಾಜ್ಯ–ರಾಮರಾಜ್ಯ ನಿರ್ಮಾಣದ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದ ಅವರು, ಇದರಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕೂ ಅವಕಾಶವಿದ್ದು, ಕರ್ನಾಟಕದಲ್ಲಿ ಸುಮಾರು 30 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸಲು ಸಾಧ್ಯತೆ ಇದೆ ಎಂದು ತಿಳಿಸಿದರು. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆಧಾರ್ ಸೀಡಿಂಗ್ ಹಾಗೂ ಡಿಜಿಟಲೀಕರಣ ಅಳವಡಿಸಲಾಗಿದೆ ಎಂದು ಹೇಳಿದರು.

ಹಿಂದಿನ ಕೂಲಿ ಯೋಜನೆಗಳಲ್ಲಿ ನಡೆದ ಅವ್ಯವಹಾರಗಳನ್ನು ಸ್ಮರಿಸಿದ ಬೊಮ್ಮಾಯಿ, ಕೂಲಿಗಾಗಿ ಕಾಳು ಯೋಜನೆಯಲ್ಲಿ ಅಕ್ರಮಗಳು ನಡೆದಿದ್ದು, ಗುಲಬರ್ಗಾ ಹಾಗೂ ಬೆಳಗಾವಿಯಲ್ಲಿ ಸಿಬಿಐ ತನಿಖೆ ನಡೆದಿತ್ತು ಎಂದು ಹೇಳಿದರು.

ಈ ಯೋಜನೆ ಸಂವಿಧಾನದ 73ನೇ ತಿದ್ದುಪಡಿಯ ಸಂಪೂರ್ಣ ಬಳಕೆಯಾಗಿದೆ. ಗ್ರಾಮ ಪಂಚಾಯತಿ ಸದಸ್ಯರು ವಿಧೇಯಕವನ್ನು ಸರಿಯಾಗಿ ಓದಿ, ಗ್ರಾಮೀಣ ಜನರ ಹಿತಕ್ಕಾಗಿ ಬಳಸಬೇಕು ಎಂದರು. ಕಾಂಗ್ರೆಸ್ ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಅವರ ನಿಜಬಣ್ಣ ಬಯಲಾಗುತ್ತದೆ ಎಂದು ಟೀಕಿಸಿದರು.

ಯೋಜನೆಗೆ ಗಾಂಧಿ ಹೆಸರು ಇಲ್ಲ ಎಂಬ ಕಾಂಗ್ರೆಸ್ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಅವರು, “ಈಗಾಗಲೇ ಶೇ 80ರಷ್ಟು ಯೋಜನೆಗಳು ನೆಹರು–ಗಾಂಧಿ ಕುಟುಂಬದ ಹೆಸರಲ್ಲಿವೆ. ಚುನಾವಣೆಗಾಗಿ ಗಾಂಧಿ ಹೆಸರನ್ನು ದುರುಪಯೋಗ ಮಾಡಿದ್ದಾರೆ. ಗಾಂಧಿಯನ್ನು ರಾಮನಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಈ ಯೋಜನೆಗೆ ರಾಮನ ಹೆಸರು ಇಟ್ಟಿರುವುದಕ್ಕೆ ಗಾಂಧಿಯ ಆತ್ಮ ಖುಷಿಯಾಗಿರುತ್ತದೆ” ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande