
ಬೆಂಗಳೂರು, 10 ಅಕ್ಟೋಬರ್ (ಹಿ.ಸ.):
ಬೆಂಗಳೂರು ನಗರದ ಬ್ರಿಗೇಡ್ ರಸ್ತೆಯಲ್ಲಿರುವ ಲೇಡಿಸ್ ಪಬ್ಗಳೂ ಸೇರಿದಂತೆ ಹಲವು ಪಬ್ಗಳು ಮತ್ತು ಮನರಂಜನಾ ಕೇಂದ್ರಗಳ ಮೇಲೆ ಪೊಲೀಸರು ತಡರಾತ್ರಿ ದಿಢೀರ್ ತಪಾಸಣೆ ನಡೆಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಭಾಗವಹಿಸಿದ್ದರು.
ಪಬ್ಗಳು ನಿಗದಿತ ಸಮಯದೊಳಗೆ ಕಾರ್ಯನಿರ್ವಹಿಸುತ್ತಿವೆಯೇ, ಅಪ್ರಾಪ್ತರಿಗೆ ಮದ್ಯ ಪೂರೈಸಲಾಗುತ್ತಿದೆಯೇ ಹಾಗೂ ನಿಯಮಬಾಹಿರ ಚಟುವಟಿಕೆಗಳು ನಡೆಯುತ್ತಿವೆಯೇ ಎಂಬುದನ್ನು ಪರಿಶೀಲಿಸುವುದು ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿತ್ತು.
ಪಬ್ಗಳ ನಿಯಮ ಪಾಲನೆಗೆ ಪರಿಶೀಲನೆ:ಬ್ರಿಗೇಡ್ ರಸ್ತೆಯಲ್ಲಿರುವ ಬ್ರಿಗೇಡ್ ಗಾರ್ಡನ್, ಪೇಜ್ ತ್ರೀ ಸೇರಿದಂತೆ ಕೆಲವು ಪಬ್ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.
ನಿಗದಿತ ಸಮಯಕ್ಕೆ ಪಬ್ಗಳನ್ನು ಮುಚ್ಚಲಾಗುತ್ತಿದೆಯೇ, ಪರವಾನಗಿ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತಿದೆಯೇ ಎಂಬುದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಅಪ್ರಾಪ್ತರಿಗೆ ಮದ್ಯ ಪೂರೈಕೆ ಮತ್ತು ಇತರ ಅಕ್ರಮ ಚಟುವಟಿಕೆಗಳ ಸಾಧ್ಯತೆಯ ಬಗ್ಗೆಯೂ ಪೊಲೀಸರು ನಿಗಾ ವಹಿಸಿದ್ದಾರೆ. ಆದರೆ, ದಾಳಿಯ ವೇಳೆ ನಿರ್ದಿಷ್ಟವಾಗಿ ಯಾವ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ ಎಂಬುದರ ಕುರಿತು ಸಂಪೂರ್ಣ ಅಧಿಕೃತ ವಿವರಗಳು ಸ್ಪಷ್ಟವಾಗಿಲ್ಲ.
ಈ ಕಾರ್ಯಾಚರಣೆ, ಪಬ್ಗಳನ್ನು ತೆರೆಯಲು ಮತ್ತು ಮುಚ್ಚಲು ನಿಗದಿಪಡಿಸಿರುವ ಸಮಯವನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವುದಕ್ಕೆ ಆದ್ಯತೆ ನೀಡಲಾಗಿದೆ.
ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಪಬ್ಗಳಿಗೆ ಸೂಚನೆ ನೀಡಲಾಗಿದೆ ಎಂದು ಪೋಲಿಸ್ ಆಯುಕ್ತ ಸೀಮಂತ್ ಕುಮಾರ ಸಿಂಗ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R