ರಿಯಾದ್ ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ಖಂಡಿಸಿದ ಭಾರತ
ನವದೆಹಲಿ, 11 ಅಕ್ಟೋಬರ್ (ಹಿ.ಸ.): ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಇತರ ನಾಗರಿಕ ಮೂಲಸೌಕರ್ಯಗಳ ಮೇಲೆ ಇತ್ತೀಚೆಗೆ ನಡೆದ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ಭಾರತದ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಕಳೆದ ಕೆ
भारत की ओर से जारी बयान


ನವದೆಹಲಿ, 11 ಅಕ್ಟೋಬರ್ (ಹಿ.ಸ.):

ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಇತರ ನಾಗರಿಕ ಮೂಲಸೌಕರ್ಯಗಳ ಮೇಲೆ ಇತ್ತೀಚೆಗೆ ನಡೆದ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ.

ಭಾರತದ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಕಳೆದ ಕೆಲವು ದಿನಗಳಿಂದ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪದೇಪದೆ ನಡೆದ ದಾಳಿಗಳನ್ನು ಖಂಡಿಸಲಾಗಿದೆ. ಅಕ್ಟೋಬರ್ 10ರಂದು ನಡೆದ ದಾಳಿಯನ್ನೂ ಭಾರತ ಖಂಡಿಸಿದೆ. ಈ ದಾಳಿಗಳಲ್ಲಿ ಹಲವರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಆಸ್ತಿಪಾಸ್ತಿಗೂ ಹಾನಿಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭಾರತ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದೆ.

ಸಾಮಾನ್ಯ ನಾಗರಿಕರು ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಪದೇಪದೆ ನಡೆಯುತ್ತಿರುವ ದಾಳಿಗಳು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಇಂತಹ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಭಾರತ ಆಗ್ರಹಿಸಿದೆ.

ಸೌದಿ ಅರೇಬಿಯಾದ ಸಾರ್ವಭೌಮತ್ವವನ್ನು ರಕ್ಷಿಸುವ ವಿಚಾರದಲ್ಲಿ ಅಲ್ಲಿನ ಜನತೆ ಮತ್ತು ಸರ್ಕಾರದೊಂದಿಗೆ ಭಾರತ ಒಗ್ಗಟ್ಟಿನಿಂದ ನಿಂತಿದೆ. ಈ ಪ್ರದೇಶದಲ್ಲಿ ಆದಷ್ಟು ಶೀಘ್ರ ಶಾಂತಿ ಮತ್ತು ಸಾಮಾನ್ಯ ಪರಿಸ್ಥಿತಿ ಮರುಸ್ಥಾಪನೆಯಾಗಲಿದೆ ಎಂಬ ನಿರೀಕ್ಷೆಯನ್ನೂ ಭಾರತ ವ್ಯಕ್ತಪಡಿಸಿದೆ.

ಆಭಾ ವಿಮಾನ ನಿಲ್ದಾಣದ ಮೇಲೂ ದಾಳಿ

ಇದಕ್ಕೂ ಮೊದಲು ಮಂಗಳವಾರ ಸೌದಿ ಅರೇಬಿಯಾದ ಆಭಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆದಿತ್ತು. ಈ ಘಟನೆಯಲ್ಲಿ ಮೊರಾಕೊ ಮತ್ತು ಅಲ್ಜೀರಿಯಾದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದರು. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿತ್ತು. ಗಾಯಗೊಂಡ ಎಲ್ಲರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬುಧವಾರ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆದಿತ್ತು. ಇದರ ಬೆನ್ನಲ್ಲೇ ಶನಿವಾರವೂ ಇದೇ ವಿಮಾನ ನಿಲ್ದಾಣದ ಮೇಲೆ ಮತ್ತೊಂದು ದಾಳಿ ನಡೆದಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande