
ಬೆಂಗಳೂರು, 11 ಅಕ್ಟೋಬರ್ (ಹಿ.ಸ.):
ತಮ್ಮ ಪರಿಶ್ರಮ, ಬದ್ಧತೆ ಮತ್ತು ಸಾಧನೆಯ ಮೂಲಕ ಸಮಾಜಕ್ಕೆ ಪ್ರೇರಣೆಯಾಗಿರುವ ಮಹಿಳಾ ಸಾಧಕರ ಕೊಡುಗೆ ಶ್ಲಾಘನೀಯ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಹೇಳಿದರು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಮತ್ತು ವೇದಿಕೆ ವತಿಯಿಂದ ಆಯೋಜಿಸಿದ್ದ ಆರನೇ ವರ್ಷದ ಅಂತರರಾಷ್ಟ್ರೀಯ ಮಹಿಳಾ ಮತ್ತು ಯುವ ಸಾಧಕರ ಪ್ರಶಸ್ತಿ ಪ್ರದಾನ ಸಮಾರಂಭ–2026ರಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಪ್ರಶಸ್ತಿಗೆ ಭಾಜನರಾದ ಮಹಿಳಾ ಸಾಧಕರನ್ನು ಗೌರವಿಸಿದ ಅವರು, ಎಲ್ಲ ಪ್ರಶಸ್ತಿ ಪುರಸ್ಕೃತರಿಗೂ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು. ಸಾಧಕಿಯರ ಸಾಧನೆಗಳು ಇನ್ನಷ್ಟು ಎತ್ತರಕ್ಕೇರಲಿ ಹಾಗೂ ಸಮಾಜಕ್ಕೆ ಸದಾ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.