
ಬಳ್ಳಾರಿ, 12 ಅಕ್ಟೋಬರ್ (ಹಿ.ಸ.)
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಬಿ.ಐ.ಟಿ.ಎಂ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 13 ರಂದು ಆಯೋಜಿಸಲಾಗಿದೆ.
ಕಾರ್ಯಕ್ರಮವು ನಗರದ ಬಿ.ಐ.ಟಿ.ಎಂ ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಜರುಗಲಿದ್ದು, ಈ ಬಾರಿಯ ಧ್ಯೇಯವಾಕ್ಯ ‘ಅನುಭವದ ಧ್ವನಿಗಳಿಗೆ ಕಿವಿಯಾಗೋಣ- ನೈಜ ಧ್ವನಿಗಳಿಂದ ನೈಜ ಬದಲಾವಣೆ’ ಎಂಬುದಾಗಿದೆ.
ಕಾರ್ಯಕ್ರಮವನ್ನು ಬಳ್ಳಾರಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಮರ್ಶಾ ಮಂಡಳಿ ಅಧ್ಯಕ್ಷರಾದ ಮೋಹನ್ ಎಚ್.ಎ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಡಿ ಮಳಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಐ.ಟಿ.ಎಂ ಕಾಲೇಜಿನ ಅಧ್ಯಕ್ಷ ಡಾ. ಯಶವಂತ್ ಭೂಪಾಲ್ ವಹಿಸಲಿದ್ದಾರೆ. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ವೀರೇಂದ್ರ ಕುಮಾರ್ ಕೆ.ಜಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಜಿಲ್ಲಾ ಕೇಂದ್ರ ಕಾರಾಗೃಹದ ಮನೋರೋಗ ತಜ್ಞ ಡಾ. ನಂದ ಕಿಶೋರ್ ರೆಡ್ಡಿ ಅವರು ಉಪನ್ಯಾಸ ನೀಡಲಿದ್ದಾರೆ.
ಜಿಲ್ಲಾ ಶಸ್ತಚಿಕಿತ್ಸಕ ಡಾ. ಎನ್. ಬಸರೆಡ್ಡಿ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್. ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ ವಿ., ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಬಿ.ಐ.ಟಿ.ಎಂ ಕಾಲೇಜಿನ ನಿರ್ದೇಶಕ ಡಾ. ಪೃಥ್ವಿರಾಜ್ ಭೂಪಾಲ್ ಹಾಗೂ ಪ್ರಾಂಶುಪಾಲ ಡಾ. ಯಡವಲ್ಲಿ ಬಸವರಾಜ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಎಸ್ ಕರ್ಜಗಿ ಅವರು ಸ್ವಾಗತ ಹಾಗೂ ನಿರೂಪಣೆ ಮಾಡಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್