
ಬಳ್ಳಾರಿ, 12 ಅಕ್ಟೋಬರ್ (ಹಿ.ಸ.)
ಅಖಿಲ ಭಾರತ ಕ್ರೈಸ್ತ ಮಹಾಸಭಾದ ಸಿರುಗುಪ್ಪ ತಾಲೂಕ ಘಟಕದ ಪದಾಧಿಕಾರಿಗಳ ಆಯ್ಕೆ ನಡೆದಿದೆ.
ಜಿಲ್ಲಾ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿಗಳಾಗಿ ನುಂಕೇಶ್ ಡೇವಿಡ್, ಸಾಮಾಜಿಕ ಸೇವೆಗಳ ವಿಭಾಗದ ಅಧ್ಯಕ್ಷರಾಗಿ ಚಿಕ್ಕಬಳ್ಳಾರಿ ನಾಗಪ್ಪ, ಸೇವಕರ ವಿಭಾಗದ ಅಧ್ಯಕ್ಷರಾಗಿ ದೇವರಾಜ್, ಗೌರವಾಧ್ಯಕ್ಷರಾಗಿ ಸುನಿಲ್ ಕುಮಾರ್, ಯುವ ವಿಭಾಗದ ಅಧ್ಯಕ್ಷರಾಗಿ ಸುನಿಲ್ ಕುಮಾರ್, ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶಾಂತಮ್ಮ, ಉಪಾಧ್ಯಕ್ಷರಾಗಿ ಸರಸ್ವತಿ ಮತ್ತು ಕಾರ್ಯದರ್ಶಿಗಳಾಗಿ ರಾಘವೇಂದ್ರ ಸಲಹೆಗಾರರಾಗಿ ಜಯಪ್ರಭ ಅವರು ಆಯ್ಕೆಯಾಗಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್