ಶಿವಮೊಗ್ಗ: ಹೊಸೂರು ಗ್ರಾಮದಲ್ಲಿ ನಿರಂತರ ಕುಡಿಯುವ ನೀರು ಪೂರೈಕೆಗೆ ಚಾಲನೆ
ಶಿಕಾರಿಪುರ, 13 ಅಕ್ಟೋಬರ್ (ಹಿ.ಸ.) ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಜಲ ಜೀವನ ಮಿಷನ್ ಯೋಜನೆಯಡಿ ಶೇ.100ರಷ್ಟು ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ‘ಜಲ ಸಮರ್ಪಣೆ ದಿವಸ್’ ಹಾಗೂ ‘24x7 ನಿರಂತರ ಕುಡಿಯುವ ನೀರು ಪೂರೈಕೆ’ ಘೋಷಣೆ
hosuru-village-jal-jeevan-mission-24x7-drinking-water-supply


ಶಿಕಾರಿಪುರ, 13 ಅಕ್ಟೋಬರ್ (ಹಿ.ಸ.)

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಜಲ ಜೀವನ ಮಿಷನ್ ಯೋಜನೆಯಡಿ ಶೇ.100ರಷ್ಟು ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ‘ಜಲ ಸಮರ್ಪಣೆ ದಿವಸ್’ ಹಾಗೂ ‘24x7 ನಿರಂತರ ಕುಡಿಯುವ ನೀರು ಪೂರೈಕೆ’ ಘೋಷಣೆ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ, ಗ್ರಾಮೀಣ ಪ್ರದೇಶದ ಪ್ರತಿಯೊಂದು ಕುಟುಂಬಕ್ಕೂ ಶುದ್ಧ ಕುಡಿಯುವ ನೀರು ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜಲ ಜೀವನ ಮಿಷನ್ ಯೋಜನೆಯು ಗ್ರಾಮೀಣ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಮೂಲಕ ಜನರ ಜೀವನಮಟ್ಟ ಸುಧಾರಿಸಲು ನೆರವಾಗಿದೆ.

ನಮ್ಮ ಶಿಕಾರಿಪುರ ಕ್ಷೇತ್ರದ ಜನತೆಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಿರುವುದು ಅತ್ಯಂತ ಸಂತೃಪ್ತಿ ತಂದಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ಮುಂದುವರಿಯಲಿವೆ” ಎಂದು ಹೇಳಿದರು.

ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆಯ ಕಾಮಗಾರಿಗಳು ಸಂಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜಲ ಸಮರ್ಪಣೆ ದಿವಸ್ ಆಚರಿಸಲಾಯಿತು. ಇದರೊಂದಿಗೆ ಗ್ರಾಮದಲ್ಲಿ ದಿನದ 24 ಗಂಟೆಯೂ ನಿರಂತರ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಘೋಷಿಸಲಾಯಿತು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಗುರುಮೂರ್ತಿ ಸೇರಿದಂತೆ ಪ್ರಮುಖರು, ಅಧಿಕಾರಿಗಳು ಹಾಗೂ ಕ್ಷೇತ್ರದ ನಾಗರಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande