
ಗದಗ, 14 ಅಕ್ಟೋಬರ್ (ಹಿ.ಸ.):
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಪದ್ಮಾವತಿ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗೆ ಆಹುತಿಯಾಗಿದೆ.
ಕಾರ್ಖಾನೆಯಲ್ಲಿ ಬೆಳಗಿನ ಜಾವ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಪರಿಣಾಮವಾಗಿ ಕಾರ್ಖಾನೆಯಲ್ಲಿದ್ದ ಅಪಾರ ಪ್ರಮಾಣದ ಹತ್ತಿ ಸುಟ್ಟು ಕರಕಲಾಗಿದೆ. ಘಟನೆಯಿಂದಾಗಿ ಕಾರ್ಖಾನೆ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಶಂಕೆ:
ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಘಟನೆಯಿಂದ ಕಾರ್ಖಾನೆಯಲ್ಲಿದ್ದ ಹತ್ತಿ ಸೇರಿದಂತೆ ಇತರ ವಸ್ತುಗಳಿಗೆ ಹಾನಿಯಾಗಿದ್ದು, ನಷ್ಟದ ನಿಖರ ಪ್ರಮಾಣದ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ. ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP