ಸಾಹಿತಿ, ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಬೆಂಬಲಿಸಲು ಮನವಿ
ಬಳ್ಳಾರಿ, 14 ಅಕ್ಟೋಬರ್ (ಹಿ.ಸ.) ಕನ್ನಡ ಸಾಹಿತ್ಯ ಪರಿಷತ್ತಿನ ಐತಿಹಾಸಿಕ ಪರಂಪರೆ, ಮೂಲ ಆಶಯಗಳು ಹಾಗೂ ಕನ್ನಡಪರ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಸಾಹಿತಿ, ಪತ್ರಕರ್ತ, ಕನ್ನಡಪರ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಅವರು ಸ್ಪರ್ಧಿಸುತ್ತಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಯೊಬ
ಸಾಹಿತಿ, ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಬೆಂಬಲಿಸಲು ಮನವಿ


ಬಳ್ಳಾರಿ, 14 ಅಕ್ಟೋಬರ್ (ಹಿ.ಸ.)

ಕನ್ನಡ ಸಾಹಿತ್ಯ ಪರಿಷತ್ತಿನ ಐತಿಹಾಸಿಕ ಪರಂಪರೆ, ಮೂಲ ಆಶಯಗಳು ಹಾಗೂ ಕನ್ನಡಪರ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಸಾಹಿತಿ, ಪತ್ರಕರ್ತ, ಕನ್ನಡಪರ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಅವರು ಸ್ಪರ್ಧಿಸುತ್ತಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಯೊಬ್ಬ ಸದಸ್ಯರೂ ಬೆಂಬಲಿಸಬೇಕು ಎಂದು ಸಾಹಿತಿಗಳಾದ ಎಸ್.ಜಿ. ಸಿದ್ದರಾಮಯ್ಯ ಹಾಗೂ ವಸುಂದರಾ ಭೂಪತಿ ಅವರು ಮನವಿ ಮಾಡಿದ್ದಾರೆ.

ಪತ್ರಿಕಾ ಭವನದಲ್ಲಿ ಸುದ್ದಿಗಾರರ ಜೊತೆಯಲ್ಲಿ ಬುಧವಾರ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಸಮಸ್ತ ಕನ್ನಡಿಗರ ಹೆಮ್ಮೆಯ ಸಂಸ್ಥೆ. 112 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ. ಈ ಸಂಸ್ಥೆಯ ಘನತೆ, ಗೌರವ ಹಾಗೂ ಕನ್ನಡಪರ ಆಶಯಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ. ಈ ನಿಟ್ಟಿನಲ್ಲಿ ಜಾಣಗೆರೆ ವೆಂಕಟರಾಮಯ್ಯ ಅವರು ಸಮರ್ಥರು ಎಂದರು.

ಈ ಸಂದರ್ಭದಲ್ಲಿ ಜಾಣಗೇರಿ ವೆಂಕಟರಾಮಯ್ಯ , ಶೇಖರ್ ಗೌಡ, ಕಸಪ ಜಿಲ್ಲಾ ಮಾಜಿ ಅಧ್ಯಕ್ಷ ಎಚ್. ಹಂಪನಗೌಡ, ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಸ್. ಸುರೇಶ, ಕಪ್ಪಗಲ್ಲು ಚಂದ್ರಶೇಖರ್ ಆಚಾರಿ, ಕೇಂದ್ರ ಮಕ್ಕಳ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕøತ ಶಿಕ್ಷಕ ಶಿವಲಿಂಗಪ್ಪ ಹಂದ್ಯಾಳ್, ಹೊಸಪೇಟೆ ಶಿವರಾಂ, ಕಸಾಪ ಗ್ರಾಮೀಣ ಭಾಗದ ಕಾರ್ಯದರ್ಶಿ ಜೆ.ಹುಸೇನ್ ಭಾಷಾ, ಜಗದೀಶ್ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande