
ಬಳ್ಳಾರಿ, 15 ಅಕ್ಟೋಬರ್ (ಹಿ.ಸ.)
ಹಗರಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಅಕ್ಟೋಬರ್ 16ರಂದು ವಿಶ್ವ ಆಹಾರ ದಿನಾಚರಣೆ ಹಾಗೂ ಸಿರಿಧಾನ್ಯಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮೇಲ್ವಿಚಾರಕ ರವಿ ಎಸ್. ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಮೂಲಕ ಕೃಷಿ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿ, ಆಹಾರ ಭದ್ರತೆ ಹಾಗೂ ಸಿರಿಧಾನ್ಯಗಳ ಮಹತ್ವದ ಕುರಿತು ರೈತರಿಗೆ ಅರಿವು ಮೂಡಿಸಲಾಗುವುದು.
ಕಾರ್ಯಕ್ರಮವು ಬೆಳಿಗ್ಗೆ 10 ಗಂಟೆಯಿಂದ 10.30ರವರೆಗೆ ಉದ್ಘಾಟನೆಯೊಂದಿಗೆ ಆರಂಭವಾಗಲಿದೆ. ಬೆಳಿಗ್ಗೆ 10.30ರಿಂದ 11.30ರವರೆಗೆ ವಿಶ್ವ ಆಹಾರ ದಿನಾಚರಣೆಯ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ಬಳಿಕ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೃಷಿ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಮಧ್ಯಾಹ್ನ 2 ಗಂಟೆಯಿಂದ 3.30ರವರೆಗೆ ಸುಸ್ಥಿರ ಆಹಾರ ಉತ್ಪಾದನಾ ಪದ್ಧತಿಗಳು ಹಾಗೂ ಆಹಾರ ಸಂಸ್ಕರಣೆಯ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕೃಷಿ ಉತ್ಪನ್ನಗಳ ಮಹತ್ವ, ಪೌಷ್ಟಿಕ ಆಹಾರ, ಆಹಾರ ಭದ್ರತೆ ಹಾಗೂ ಸಿರಿಧಾನ್ಯಗಳ ಬಳಕೆಯ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಕೃಷಿ ವಿಜ್ಞಾನ ಕೇಂದ್ರದ ಮೇಲ್ವಿಚಾರಕ ರವಿ ಎಸ್. ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್