ಸಿಹಿ ತಿಂಡಿ ತಯಾರಿಕಾ ಘಟಕ, ಮಾರಾಟ ಮಳಿಗೆಗಳಲ್ಲಿ ವಿಶೇಷ ತಪಾಸಣೆ: ಯು.ಟಿ. ಖಾದರ್
ಕೃತಕ ಬಣ್ಣ, ಕಲಬೆರಕೆ ಕಂಡುಬಂದರೆ ಕಾನೂನು ಕ್ರಮದ ಎಚ್ಚರಿಕೆ
UT-Khader-Warns-Legal-Action-Against-Adulterated-Sweets-During-Special-Inspections


ಬೆಂಗಳೂರು, 15 ಅಕ್ಟೋಬರ್ (ಹಿ.ಸ.):

ಹಬ್ಬಗಳ ಹಿನ್ನೆಲೆಯಲ್ಲಿ ಸಿಹಿ ತಿಂಡಿಗಳ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳಲ್ಲಿ ವಿಶೇಷ ತಪಾಸಣೆ ನಡೆಸಲಾಗುವುದು.

ಸಿಹಿ ತಿಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆ, ಕಲಬೆರಕೆ ಸೇರಿದಂತೆ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಸಿಹಿ ತಿಂಡಿಗಳಿಗೆ ಬೇಡಿಕೆ ಹೆಚ್ಚಾಗುವುದರಿಂದ ಅವುಗಳ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ.

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸಿಹಿ ತಿಂಡಿಗಳ ತಯಾರಿಕೆ ಹಾಗೂ ಮಾರಾಟದಲ್ಲಿ ನಿಗದಿತ ಆಹಾರ ಸುರಕ್ಷತಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಅನುಮತಿಸದ ಕೃತಕ ಬಣ್ಣಗಳನ್ನು ಬಳಸುವುದು, ಕಳಪೆ ಗುಣಮಟ್ಟದ ಪದಾರ್ಥಗಳನ್ನು ಮಿಶ್ರಣ ಮಾಡುವುದು ಹಾಗೂ ಆಹಾರದಲ್ಲಿ ಕಲಬೆರಕೆ ನಡೆಸುವಂತಹ ಅಕ್ರಮಗಳ ವಿರುದ್ಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ತಪಾಸಣೆ ವೇಳೆ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಘಟಕಗಳು ಮತ್ತು ಮಾರಾಟಗಾರರ ವಿರುದ್ಧ ಕಾನೂನುಬದ್ಧ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande