ಸ್ವಾತಂತ್ರ್ಯ ಹೋರಾಟಗಾರ ವೀರಪಾಂಡ್ಯ ಕಟ್ಟಬೊಮ್ಮನ್ಗೆ ಉಪರಾಷ್ಟ್ರಪತಿ ಗೌರವ ನಮನ
ನವದೆಹಲಿ, 16 ಅಕ್ಟೋಬರ್ (ಹಿ.ಸ.): ಸ್ವಾತಂತ್ರ್ಯ ಹೋರಾಟಗಾರ ವೀರಪಾಂಡ್ಯ ಕಟ್ಟಬೊಮ್ಮನ್ ಅವರ ಪುಣ್ಯತಿಥಿಯ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶುಕ್ರವಾರ ಉಪರಾಷ್ಟ್ರಪತಿ ಭವನದಲ್ಲಿ ಗೌರವ ನಮನ ಸಲ್ಲಿಸಿದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಬ್ರಿಟಿ
उपराष्ट्रपति वीरपांडिया कट्टाबोम्मन की स्मृति में उनके चित्र पर पुष्प अर्पित करते हुए।


ನವದೆಹಲಿ, 16 ಅಕ್ಟೋಬರ್ (ಹಿ.ಸ.):

ಸ್ವಾತಂತ್ರ್ಯ ಹೋರಾಟಗಾರ ವೀರಪಾಂಡ್ಯ ಕಟ್ಟಬೊಮ್ಮನ್ ಅವರ ಪುಣ್ಯತಿಥಿಯ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶುಕ್ರವಾರ ಉಪರಾಷ್ಟ್ರಪತಿ ಭವನದಲ್ಲಿ ಗೌರವ ನಮನ ಸಲ್ಲಿಸಿದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಬ್ರಿಟಿಷ್ ಸಾಮ್ರಾಜ್ಯಶಾಹಿಯ ಮುಂದೆ ತಲೆಬಾಗಲು ನಿರಾಕರಿಸಿದ ವೀರಪಾಂಡ್ಯ ಕಟ್ಟಬೊಮ್ಮನ್ ಧೈರ್ಯದಿಂದ ಅದನ್ನು ವಿರೋಧಿಸಿದ್ದರು ಎಂದು ಸ್ಮರಿಸಿದ್ದಾರೆ.

ಅವರ ಶೌರ್ಯ, ತ್ಯಾಗ ಮತ್ತು ಸ್ವಾಯತ್ತತೆಯನ್ನು ರಕ್ಷಿಸುವ ಬದ್ಧತೆ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಅಳಿಸಲಾಗದ ಗುರುತು ಮೂಡಿಸಿದೆ. ಗುಲಾಮಗಿರಿಯ ಸಂಕೋಲೆಗಳನ್ನು ತಿರಸ್ಕರಿಸಿ, ದೇಶಭಕ್ತಿಯ ಉತ್ಸಾಹ ಮತ್ತು ದೃಢಸಂಕಲ್ಪದಿಂದ ತಮ್ಮ ಹಕ್ಕುಗಳನ್ನು ರಕ್ಷಿಸಲು ಹೋರಾಡಿದ ವೀರಪಾಂಡ್ಯ ಕಟ್ಟಬೊಮ್ಮನ್ ಅವರ ವೀರೋಚಿತ ಜೀವನ ಮುಂದಿನ ಪೀಳಿಗೆಯ ಜನರ ಹೃದಯದಲ್ಲಿ ಸದಾ ಜೀವಂತವಾಗಿರಲಿದೆ ಎಂದು ಉಪರಾಷ್ಟ್ರಪತಿ ತಿಳಿಸಿದ್ದಾರೆ.

ವೀರಪಾಂಡ್ಯ ಕಟ್ಟಬೊಮ್ಮನ್ ಅವರು ತಮಿಳುನಾಡಿನ ತೂತುಕುಡಿ ಜಿಲ್ಲೆಯ ಪಂಚಾಲಂಕುರಿಚಿಯ ಪಾಳೆಯಗಾರರಾಗಿದ್ದರು. ಆ ಪ್ರದೇಶವು ಹಿಂದೆ ತಿರುನೆಲ್ವೇಲಿ ವ್ಯಾಪ್ತಿಗೆ ಸೇರಿತ್ತು. ಅವರನ್ನು ಪಂಚಾಲಂಕುರಿಚಿ ಪಾಳೆಯದ ಕಟ್ಟಬೊಮ್ಮನ್ ನಾಯಕ ಎಂದೂ ಕರೆಯಲಾಗುತ್ತಿತ್ತು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande