
ಧಾರವಾಡ, 20 ಅಕ್ಟೋಬರ್ (ಹಿ.ಸ.):
ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 23ರಂದು ನಡೆಯಲಿದ್ದು, ಅರ್ಹ ಮತದಾರ ನೌಕರರು ಪೂರ್ವಾನುಮತಿ ಪಡೆದು ವಿಶೇಷ ಸಾಂದರ್ಭಿಕ ರಜೆ ಪಡೆಯಬಹುದು.
ಅರ್ಹ ಪದವೀಧರ ಮತದಾರರು ಮತದಾನ ಮಾಡಲು ಮಾತ್ರ ಈ ಸೌಲಭ್ಯ ಪಡೆಯಲು ಅವಕಾಶವಿದೆ.
ಪಶ್ಚಿಮ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅರ್ಹ ಪದವೀಧರ ಮತದಾರರಿಗೆ ಮಾತ್ರ ಈ ಸೌಲಭ್ಯ ಅನ್ವಯವಾಗಲಿದೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.