
ಧಾರವಾಡ, 20 ಅಕ್ಟೋಬರ್ (ಹಿ.ಸ.):
ಕರ್ನಾಟಕದ ಜವಳಿ ಉದ್ಯಮದ ರಫ್ತು ಸಾಮರ್ಥ್ಯವನ್ನು ವಿಸ್ತರಿಸುವ ಉದ್ದೇಶದಿಂದ ಅಕ್ಟೋಬರ್ 22ರಂದು ಹುಬ್ಬಳ್ಳಿಯ ವಿದ್ಯಾನಗರದ ಪ್ರಿಯದರ್ಶಿನಿ ಕೈಮಗ್ಗ ನೇಕಾರರ ಭವನದಲ್ಲಿ ಒಂದು ದಿನದ ರಫ್ತು ಪ್ರೋತ್ಸಾಹ ಕಾರ್ಯಾಗಾರ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಕಾರ್ಯಾಗಾರದಲ್ಲಿ ‘ಜಾಗತಿಕ ಮಾರುಕಟ್ಟೆಗಾಗಿ ಜವಳಿ ಕಾರ್ಯತಂತ್ರ: 100 ಶತಕೋಟಿ ಅಮೆರಿಕನ್ ಡಾಲರ್ ರಫ್ತು ಸಾಧನೆ’ ವಿಷಯದಡಿ ಚರ್ಚೆ ನಡೆಯಲಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಅವಕಾಶಗಳು, ರಫ್ತು ಹೆಚ್ಚಳ, ಉತ್ಪನ್ನಗಳ ಗುಣಮಟ್ಟ ಸುಧಾರಣೆ, ಮಾರುಕಟ್ಟೆ ಸಂಪರ್ಕ ಹಾಗೂ ಉದ್ಯಮಗಳ ಸ್ಪರ್ಧಾತ್ಮಕತೆ ಕುರಿತು ಕಾರ್ಯಾಗಾರದಲ್ಲಿ ವಿಚಾರ ವಿನಿಮಯ ನಡೆಯಲಿದೆ.
ಕೈಮಗ್ಗ ಮತ್ತು ಜವಳಿ ಇಲಾಖೆಯ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಜವಳಿ ಉದ್ಯಮಿಗಳು, ರಫ್ತುದಾರರು ಹಾಗೂ ಜವಳಿ ಕ್ಷೇತ್ರದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.