
ಹುಬ್ಬಳ್ಳಿ, 20 ಅಕ್ಟೋಬರ್ (ಹಿ.ಸ.):
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಸಭೆ ನಡೆಯಿತು.
ಶಾಸಕ ಮಹೇಶ ಟೆಂಗಿನಕಾಯಿ ಸಭೆ ನಡೆಸಿ ಮಾತನಾಡಿ, ಚುನಾವಣೆಯ ಅಂತಿಮ ಹಂತದ ಸಿದ್ಧತೆಗಳು, ಮತದಾರರ ಸಂಪರ್ಕ ಹಾಗೂ ಮತದಾನದ ದಿನ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಮಹಾನಗರ ಪಾಲಿಕೆ ಮಹಾಪೌರರಾದ ದುರ್ಗಮ್ಮ ಶಶಿಕಾಂತ ಬಿಜವಾಡ, ಪ್ರಮುಖರಾದ ಡಾ. ರಘು ಅಕಮಂಚಿ, ಮಹೇಂದ್ರ ಕೌತಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವು ಮಣಿಸಿನಕಾಯಿ, ಬಸವರಾಜ ಗರಗ, ಮಂಡಲಗಳ ಅಧ್ಯಕ್ಷರು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ವಾರ್ಡ್ ಪ್ರಮುಖರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.