
ಧಾರವಾಡ, 20 ಅಕ್ಟೋಬರ್ (ಹಿ.ಸ.)
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ನವೋದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನವೆಂಬರ್ 13, 2026ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು https://eitbt.karnataka.gov.in/en ಜಾಲತಾಣದ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಧಾರವಾಡದ ಸಾಧನಕೇರಿ ರಸ್ತೆಯ ಸರ್ಕಾರಿ ಮುದ್ರಣಾಲಯದ ಸಮೀಪವಿರುವ ಮೌಲಾನಾ ಆಝಾದ್ ಭವನದಲ್ಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು.
ಕಚೇರಿಯ ದೂರವಾಣಿ ಸಂಖ್ಯೆ 0836-2748226 ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.