ಬೆಂಗಳೂರು ನಗರದ ಕೆರೆಗಳ ಸುತ್ತ ಸ್ವಚ್ಛತಾ ಅಭಿಯಾನ
ಬೆಂಗಳೂರಿನ ನಾಲ್ಕು ಕೆರೆಗಳ ಸುತ್ತ ಸ್ವಚ್ಛತಾ ಅಭಿಯಾನ ನಡೆಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಒಟ್ಟು 69 ಕೆ.ಜಿ. ತ್ಯಾಜ್ಯವನ್ನು ತೆರವುಗೊಳಿಸಿದೆ. ಪರಿಸರ ಸಂರಕ್ಷಣೆ ಮತ್ತು ಕೆರೆಗಳ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
bengaluru-lake-cleanliness-drive-gba-removes-69-kg-waste-from-four-lakes


ಬೆಂಗಳೂರು, 21 ಅಕ್ಟೋಬರ್ (ಹಿ.ಸ.):

ಕೆರೆಗಳ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. 4 ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ, 69 ಕೆ.ಜಿ.

ತ್ಯಾಜ್ಯ ತೆರವು ಮಾಡಲಾಗಿದ್ದು, ಇದರಲ್ಲಿ 24 ಪೌರಕಾರ್ಮಿಕರು ಹಾಗೂ 10 ಸ್ವಚ್ಛತಾ ಸಿಬ್ಬಂದಿ ಭಾಗಿಯಾಗಿದ್ದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು, ತ್ಯಾಜ್ಯ ಮುಕ್ತ ನಗರವನ್ನಾಗಿಸಿ ಸುಂದರ ಹಾಗೂ ಸ್ವಚ್ಛ ನಗರವನ್ನಾಗಿ ರೂಪಿಸುವುದು ಹಾಗೂ ಸ್ವಚ್ಛ ಸರ್ವೇಕ್ಷಣ 2025-26ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿರುವ 4ನೇ ಹಂತದ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ, ಈಗಾಗಲೇ ರೂಪಿಸಲಾಗಿರುವ ಸ್ವಚ್ಛತಾ ಕಾರ್ಯ ವೇಳಾಪಟ್ಟಿಯಂತೆ (ಆಯಕ್ಷನ್ ಪ್ಲಾನ್ನಂತೆ) ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಕೆರೆಕಟ್ಟೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ಜಗದೀಶ್ ಜಿ. ಅವರು ತಿಳಿಸಿದ್ದಾರೆ.

4 ಕೆರೆಕಟ್ಟೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ; 69 ಕೆ.ಜಿ. ತ್ಯಾಜ್ಯ ತೆರವು

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಹಲಸೂರು ಕೆರೆ, ಜಿ.ಎಂ ಪಾಳ್ಯ ಭೈರಸಂದ್ರ ಕೆರೆ, ಕಸ್ತೂರಿ ನಗರ ಕೆರೆ, ಕಗ್ಗದಾಸಪುರ ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛ, ಶುಚಿತ್ವಯುತ ಹಾಗೂ ಸುಂದರವಾಗಿಡುವ ಉದ್ದೇಶದಿಂದ ವಿಶೇಷ ಸ್ವಚ್ಛತಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಕೆರೆ ಅಂಗಳ, ಸುತ್ತಮುತ್ತಲಿನ ರಸ್ತೆ ಬದಿಗಳು ಹಾಗೂ ಸಾರ್ವಜನಿಕರು ಸಂಚರಿಸುವ ಪ್ರದೇಶಗಳನ್ನು ಸ್ವಚ್ಛಗೊಳಿಸಿ ಸಂಗ್ರಹವಾಗಿದ್ದ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ.

ಸ್ವಚ್ಛತಾ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆರೆಗಳ ಸುತ್ತಮುತ್ತ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಕಾಗದ, ಆಹಾರ ತ್ಯಾಜ್ಯ, ನೀರಿನ ಬಾಟಲಿಗಳು, ಒಣ ಎಲೆಗಳು ಹಾಗೂ ಇತರೆ ಘನ ತ್ಯಾಜ್ಯವನ್ನು ಸಂಗ್ರಹಿಸಿ ತೆರವುಗೊಳಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಒಟ್ಟು 69 ಕೆ.ಜಿ. ತ್ಯಾಜ್ಯವನ್ನು ತೆರವುಗೊಳಿಸಿ, ಸೂಕ್ತ ವಿಲೇವಾರಿಗಾಗಿ ಸಂಬಂಧಿಸಿದ ಘಟಕಗಳಿಗೆ ರವಾನಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

24 ಪೌರಕಾರ್ಮಿಕರು ಹಾಗೂ 10 ಸ್ವಚ್ಛತಾ ಸಿಬ್ಬಂದಿ ಭಾಗಿ

ಈ ವಿಶೇಷ ಸ್ವಚ್ಛತಾ ಕಾರ್ಯಾಚರಣೆಯಲ್ಲಿ ಒಟ್ಟು 24 ಪೌರಕಾರ್ಮಿಕರು ಹಾಗೂ 10 ಸ್ವಚ್ಛತಾ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ ಸ್ವಚ್ಛತಾ ಕಾರ್ಯವನ್ನು ಯಶಸ್ವಿಗೊಳಿಸಿದ್ದು. ಕೆರೆಗಳು ನಗರದ ಪರಿಸರ ಸಮತೋಲನ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮಹತ್ವದ ಪಾತ್ರ ವಹಿಸುತ್ತಿದ್ದು, ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿ ಹಾಗೂ ಶುಚಿತ್ವಯುತವಾಗಿಡುವುದು ಕೇಂದ್ರ ನಗರ ಪಾಲಿಕೆಯ ಪ್ರಮುಖ ಆದ್ಯತೆಯಾಗಿದೆ.

ಸಾರ್ವಜನಿಕರಿಗೆ ಸ್ವಚ್ಛ ಹಾಗೂ ಉತ್ತಮ ಪರಿಸರ ಕಲ್ಪಿಸುವ ನಿಟ್ಟಿನಲ್ಲಿ ಕೆರೆಗಳು ಮತ್ತು ಅವುಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂತಹ ವಿಶೇಷ ಸ್ವಚ್ಛತಾ ಕಾರ್ಯಾಚರಣೆಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು ಎಂದು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಜಿ. ಅವರು ತಿಳಿಸಿದ್ದಾರೆ.

ಸ್ವಚ್ಛತೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯ ಕೆರೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ತ್ಯಾಜ್ಯ ಎಸೆಯದಂತೆ ಸಾರ್ವಜನಿಕರು ಸಹಕರಿಸಬೇಕು. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿ ಕಾಪಾಡುವ ಮೂಲಕ ನಗರದ ಸ್ವಚ್ಛತೆ ಹಾಗೂ ಸೌಂದರ್ಯವನ್ನು ಹೆಚ್ಚಿಸಲು ಪ್ರತಿಯೊಬ್ಬ ನಾಗರೀಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಜಿ. ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande