ಉನ್ನತ ಶಿಕ್ಷಣ ವ್ಯವಸ್ಥೆ ಬಲಪಡಿಸಲು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರೊಂದಿಗೆ ಜೋಶಿ ಸಮಾಲೋಚನೆ
ನವದೆಹಲಿ, 22 ಅಕ್ಟೋಬರ್ (ಹಿ.ಸ.): ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ಟಾಟಾ ಸನ್ಸ್ ಲಿಮಿಟೆಡ್ ಅಧ್ಯಕ್ಷ ಹಾಗೂ ಲಕ್ನೋದ ಭಾರತೀಯ ನಿರ್ವಹಣಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರೊಂದಿಗೆ ಗುರುವಾ
ಟಾಟಾ ಸನ್ಸ್ ಲಿಮಿಟೆಡ್ ಅಧ್ಯಕ್ಷರ ಜೊತೆ ಸಚಿವ ಪ್ರಹ್ಲಾದ ಜೋಶಿ


ನವದೆಹಲಿ, 22 ಅಕ್ಟೋಬರ್ (ಹಿ.ಸ.):

ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ಟಾಟಾ ಸನ್ಸ್ ಲಿಮಿಟೆಡ್ ಅಧ್ಯಕ್ಷ ಹಾಗೂ ಲಕ್ನೋದ ಭಾರತೀಯ ನಿರ್ವಹಣಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರೊಂದಿಗೆ ಗುರುವಾರ ಸಮಾಲೋಚನೆ ನಡೆಸಿದರು.

ನವದೆಹಲಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಭಾರತದ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಹಾಗೂ ಉನ್ನತ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಸಶಕ್ತಗೊಳಿಸುವ ಕುರಿತು ಉಭಯ ನಾಯಕರು ಚರ್ಚಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಚಂದ್ರಶೇಖರನ್ ಅವರೊಂದಿಗೆ ಸಚಿವರು ಮೌಲ್ಯಯುತ ಸಲಹೆಗಳನ್ನು ವಿನಿಮಯ ಮಾಡಿಕೊಂಡರು.

ಉದ್ಯಮ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಟಾಟಾ ಸಮೂಹ ನೀಡುತ್ತಿರುವ ಕೊಡುಗೆಗಳ ಹಿನ್ನೆಲೆಯಲ್ಲಿ ಈ ಸಮಾಲೋಚನೆ ಮಹತ್ವ ಪಡೆದಿದೆ.

ಉನ್ನತ ಶಿಕ್ಷಣ ಸಂಸ್ಥೆಗಳು ಕೈಗಾರಿಕಾ ಕ್ಷೇತ್ರದ ಅಗತ್ಯಗಳಿಗೆ ಪೂರಕವಾಗಿ ನಾವೀನ್ಯತೆ ಹಾಗೂ ಸಂಶೋಧನೆ ಆಧಾರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾದ ಅಗತ್ಯದ ಕುರಿತು ಉಭಯ ನಾಯಕರು ವಿಸ್ತೃತವಾಗಿ ಚರ್ಚಿಸಿದರು.

ಯುವಜನರು ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಭಾರತದ ಸುಸ್ಥಿರ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳುವಂತೆ ಉತ್ತೇಜಿಸುವುದು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಕಾರವನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande