
ಬಳ್ಳಾರಿ, 22 ಅಕ್ಟೋಬರ್ (ಹಿ.ಸ.)
ಬಳ್ಳಾರಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಸೂಕ್ತ ದಾಖಲೆಗಳಿಲ್ಲದೆ ಅನಧಿಕೃತವಾಗಿ ಸಾಗಾಣಿಕೆ ಮಾಡುತ್ತಿದ್ದ ವೇಳೆ ವಶಪಡಿಸಿಕೊಳ್ಳಲಾದ 445 ಕ್ವಿಂಟಾಲ್ ಜೋಳವನ್ನು ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಈ ಕುರಿತು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ಜಪ್ತಿ ಮಾಡಲಾದ 445 ಕ್ವಿಂಟಾಲ್ ಜೋಳವನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.
ಅಕ್ಟೋಬರ್ 28 ರಂದು ಬೆಳಗ್ಗೆ 11.30 ಗಂಟೆಗೆ ಬಳ್ಳಾರಿಯ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಎಪಿಎಂಸಿ ಸಗಟು ಗೋದಾಮಿನಲ್ಲಿ ಈ ಹರಾಜು ಪ್ರಕ್ರಿಯೆ ನಡೆಯಲಿದೆ.
ಆಸಕ್ತ ಬಿಡ್ದಾರರು ನಿಗದಿತ ಷರತ್ತುಗಳೊಂದಿಗೆ ಹರಾಜಿನಲ್ಲಿ ಭಾಗವಹಿಸಬಹುದಾಗಿದೆ ಎಂದು ಬಳ್ಳಾರಿ ತಾಲೂಕು ತಹಶೀಲ್ದಾರರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್