ಹಾಸನಾಂಬ ಉತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ಆಹ್ವಾನ
ಬೆಂಗಳೂರು, 23 ಅಕ್ಟೋಬರ್ (ಹಿ.ಸ.): ಐತಿಹಾಸಿಕ ಹಾಸನಾಂಬ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ನೇತೃತ್ವದ ನಿಯೋಗ ಶುಕ್ರವಾರ ಅಧಿಕೃತವಾಗಿ ಆಹ್ವಾನ ನೀಡಿತು. ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಉತ್ಸವ
ಆಮಂತ್ರಣ


ಬೆಂಗಳೂರು, 23 ಅಕ್ಟೋಬರ್ (ಹಿ.ಸ.):

ಐತಿಹಾಸಿಕ ಹಾಸನಾಂಬ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ನೇತೃತ್ವದ ನಿಯೋಗ ಶುಕ್ರವಾರ ಅಧಿಕೃತವಾಗಿ ಆಹ್ವಾನ ನೀಡಿತು.

ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿತು.

ಈ ಸಂದರ್ಭದಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande