
ಬೆಂಗಳೂರು, 23 ಅಕ್ಟೋಬರ್ (ಹಿ.ಸ.):
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಪೋಲೆಂಡ್‌ನ ವಿತ್ತ ಸಚಿವ ಆಂಡ್ರೇಜ್ ಡೊಮ್ಯಾನ್ಸ್ಕಿ, ಪೋಲೆಂಡ್ ಸರ್ಕಾರದ ಹಿರಿಯ ಅಧಿಕಾರಿಗಳು, ಕರ್ನಾಟಕದ ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.