ನಾರಾಯಣಗುರುಗಳ ಚಿಂತನೆಗಳು ಇಂದಿನ ಸಮಾಜಕ್ಕೆ ದಾರಿದೀಪ: ಬಿ.ಕೆ. ಹರಿಪ್ರಸಾದ್
ಶಿವಮೊಗ್ಗ, 24 ಅಕ್ಟೋಬರ್ (ಹಿ.ಸ.): ಸಾಮಾಜಿಕ ಸಮಾನತೆ, ಮಾನವೀಯತೆ ಹಾಗೂ ಸಹೋದರತ್ವದ ಮಹಾನ್ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಚಿಂತನೆಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದ ಬ
ಬಿ.ಕೆ. ಹರಿಪ್ರಸಾದ್


ಶಿವಮೊಗ್ಗ, 24 ಅಕ್ಟೋಬರ್ (ಹಿ.ಸ.):

ಸಾಮಾಜಿಕ ಸಮಾನತೆ, ಮಾನವೀಯತೆ ಹಾಗೂ ಸಹೋದರತ್ವದ ಮಹಾನ್ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಚಿಂತನೆಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾರಾಯಣಗುರುಗಳ ‘ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು’ ಎಂಬ ವಿಶ್ವಮಾನವ ಸಂದೇಶವು ಕೇವಲ ಘೋಷಣೆಯಲ್ಲ. ಅದು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಸಮಾಜವನ್ನು ಕಟ್ಟುವ ಮಹತ್ವದ ತತ್ವವಾಗಿದೆ ಎಂದು ತಿಳಿಸಿದರು.

ಜಾತಿ ತಾರತಮ್ಯ, ಅಸ್ಪೃಶ್ಯತೆ ಹಾಗೂ ಸಾಮಾಜಿಕ ಅಸಮಾನತೆಗಳ ವಿರುದ್ಧ ನಾರಾಯಣಗುರುಗಳು ನಡೆಸಿದ ವೈಚಾರಿಕ ಕ್ರಾಂತಿ ಇಂದಿಗೂ ಸಮಾಜಕ್ಕೆ ಸ್ಫೂರ್ತಿಯಾಗಿದೆ. ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾನತೆ, ಮಾನವೀಯತೆ ಹಾಗೂ ಸಹೋದರತ್ವದ ಮೌಲ್ಯಗಳನ್ನು ಬೆಳೆಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ರೇಣುಕಾನಂದ ಸ್ವಾಮೀಜಿ ಹಾಗೂ ಶ್ರೀ ಯೋಗೇಂದ್ರ ಅವಧೂತರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಬೇಲೂರು ಗೋಪಾಲಕೃಷ್ಣ ಮತ್ತು ಸುನೀಲ್ ಕುಮಾರ್, ಜಯಂತ್ಯುತ್ಸವ ಆಚರಣಾ ಸಮಿತಿ ಅಧ್ಯಕ್ಷ ಅಶೋಕ್ ಮೂರ್ತಿ ಸೇರಿದಂತೆ ಹಲವು ಗಣ್ಯರು ಹಾಗೂ ಅಪಾರ ಸಂಖ್ಯೆಯ ಗುರುಭಕ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande