
ಬೆಂಗಳೂರು, 24 ಅಕ್ಟೋಬರ್ (ಹಿ.ಸ.):
ಬೆಂಗಳೂರಿನ ಆರ್.ನಗರದ ಪಟ್ಟಣಗೆರೆ ಸಮೀಪದ ಚಾಟ್ಸ್ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಆರ್.ಆರ್.ನಗರದ ಪಟ್ಟಣಗೆರೆ ಬಳಿ ಇರುವ ಚಾಟ್ಸ್ ಅಂಗಡಿಯಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟದಿಂದಾಗಿ ಬಬ್ಲು, ಲಕ್ಷ್ಮಮ್ಮ ಹಾಗೂ ಒಂಬತ್ತು ವರ್ಷದ ಬಾಲಕನಿಗೆ ತೀವ್ರ ಗಾಯಗಳಾಗಿವೆ. ಮಾಹಿತಿ ತಿಳಿದ ಕೂಡಲೇ ಆರ್.ಆರ್.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಯಗೊಂಡಿರುವ ಮೂವರನ್ನೂ ತಕ್ಷಣವೇ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಲಿಂಡರ್ ಸ್ಫೋಟಗೊಂಡ ಕಾರಣ ಚಾಟ್ಸ್ ಅಂಗಡಿಯ ಪರಿಸ್ಥಿತಿಯು ದೃಶ್ಯಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಹೆಚ್ಚಿನ ಸಂಖ್ಯೆಯ ಜನ ಇದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸದ್ಯಕ್ಕೆ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R