ಮತದಾರರ ಹಕ್ಕುಗಳ ರಕ್ಷಣೆ ಕುರಿತು ಕಾಂಗ್ರೆಸ್ ಮುಖಂಡರ ಸಭೆ
ದಾವಣಗೆರೆ, 25 ಅಕ್ಟೋಬರ್ (ಹಿ.ಸ.): ದಾವಣಗೆರೆಯ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರ ಗೃಹ ಕಚೇರಿಯಲ್ಲಿ ‘ಮತ ಉಳಿಸಿ–ದೇಶ ಉಳಿಸಿ’ ಅಭಿಯಾನದ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ವೀಕ್ಷಕಿ ದೀಪ್ತಿ ವರ್ಗೀಸ್, ಕರ್ನಾಟಕ ಸರ್ಕಾರದ ಮಾಜಿ ಸಚಿವೆ ರಾಣಿ ಸತೀಶ್ ಹಾಗೂ ಕೆಪಿಸಿಸಿ ಉಪಾಧ್ಯ
ಮತದಾರರ ಹಕ್ಕುಗಳ ರಕ್ಷಣೆ ಕುರಿತು ಕಾಂಗ್ರೆಸ್ ಮುಖಂಡರ ಸಭೆ


ದಾವಣಗೆರೆ, 25 ಅಕ್ಟೋಬರ್ (ಹಿ.ಸ.):

ದಾವಣಗೆರೆಯ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರ ಗೃಹ ಕಚೇರಿಯಲ್ಲಿ ‘ಮತ ಉಳಿಸಿ–ದೇಶ ಉಳಿಸಿ’ ಅಭಿಯಾನದ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಎಐಸಿಸಿ ವೀಕ್ಷಕಿ ದೀಪ್ತಿ ವರ್ಗೀಸ್, ಕರ್ನಾಟಕ ಸರ್ಕಾರದ ಮಾಜಿ ಸಚಿವೆ ರಾಣಿ ಸತೀಶ್ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಒಬೈದುಲ್ಲಾ ಷರೀಫ್ ಪಾಲ್ಗೊಂಡು ಮತದಾರರ ಹಕ್ಕುಗಳ ರಕ್ಷಣೆ, ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು, ಚುನಾವಣಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಕುರಿತು ಸಮಗ್ರವಾಗಿ ಚರ್ಚಿಸಿದರು.

ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವುದು, ‘ಮತ ಉಳಿಸಿ–ದೇಶ ಉಳಿಸಿ’ ಅಭಿಯಾನವನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವುದು ಹಾಗೂ ಮುಂಬರುವ ಸಂಘಟನಾತ್ಮಕ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆಯೂ ವಿಚಾರ ವಿನಿಮಯ ನಡೆಸಲಾಯಿತು.

ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕುಗಳನ್ನು ಸಂರಕ್ಷಿಸುವುದು ಮತ್ತು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ಖಲೀಲ್ ಉಲ್ಲಾ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande