
ಧಾರವಾಡ, 25 ಅಕ್ಟೋಬರ್ (ಹಿ.ಸ.):
2026-27 ನೇ ಸಾಲಿನ ಸೆಪ್ಟೆಂಬರ್ 2026 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಎರಡನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್ 02 ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಗೆ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.