ನ. 1ರಂದು ದೆಹಲಿಯಲ್ಲಿ ‘ಮತ ಉಳಿಸಿ–ದೇಶ ಉಳಿಸಿ’ ಕಾರ್ಯಕ್ರಮ ಪಾಲ್ಗೊಳ್ಳಲು ಶ್ರೇಯಸ್ ಪಟೇಲ್, ಮನ್ಸೂರ್ ಅಲಿ ಖಾನ್ ಮನವಿ
ವಯನಾಡ್, 25 ಅಕ್ಟೋಬರ್ (ಹಿ.ಸ.): ಮತದಾರರ ಹಕ್ಕುಗಳ ಸಂರಕ್ಷಣೆ, ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ನವೆಂಬರ್ 1ರಂದು ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆಯಲಿರುವ ‘ಮತ ಉಳಿಸಿ–ದೇಶ ಉಳಿಸಿ’ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ
ಪತ್ರಿಕಾಗೋಷ್ಠಿ


ವಯನಾಡ್, 25 ಅಕ್ಟೋಬರ್ (ಹಿ.ಸ.):

ಮತದಾರರ ಹಕ್ಕುಗಳ ಸಂರಕ್ಷಣೆ, ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ನವೆಂಬರ್ 1ರಂದು ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆಯಲಿರುವ ‘ಮತ ಉಳಿಸಿ–ದೇಶ ಉಳಿಸಿ’ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಕೇರಳದ ವಯನಾಡ್‌ನ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ವೀಕ್ಷಕ ಹಾಗೂ ಸಂಸದ ಶ್ರೇಯಸ್ ಪಟೇಲ್ ಮತ್ತು ಎಐಸಿಸಿ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದರು.

ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ಸಂರಕ್ಷಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸಲು ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲು ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande