ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ
ನವದೆಹಲಿ, 26 ಅಕ್ಟೋಬರ್ (ಹಿ.ಸ.): ದೇಶದ ಚಿನಿವಾರ ಪೇಟೆಯಲ್ಲಿ ವಾರದ ಮೊದಲ ದಿನವಾದ ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಇದರ ಪರಿಣಾಮವಾಗಿ ದೇಶದ ಬಹುತೇಕ ಮಾರುಕಟ್ಟೆಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹1,42,570ರಿಂದ ₹1,42,720ರ ನಡುವೆ ವಹಿವಾಟು
प्रतीकात्मक


ನವದೆಹಲಿ, 26 ಅಕ್ಟೋಬರ್ (ಹಿ.ಸ.):

ದೇಶದ ಚಿನಿವಾರ ಪೇಟೆಯಲ್ಲಿ ವಾರದ ಮೊದಲ ದಿನವಾದ ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಇದರ ಪರಿಣಾಮವಾಗಿ ದೇಶದ ಬಹುತೇಕ ಮಾರುಕಟ್ಟೆಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹1,42,570ರಿಂದ ₹1,42,720ರ ನಡುವೆ ವಹಿವಾಟು ನಡೆಸಿದೆ. ಅದೇ ರೀತಿ 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹1,30,690ರಿಂದ ₹1,30,840ರ ನಡುವೆ ದಾಖಲಾಗಿದೆ. ಬೆಳ್ಳಿ ಬೆಲೆಯೂ ದುರ್ಬಲಗೊಂಡಿದ್ದು, ದೆಹಲಿ ಮಾರುಕಟ್ಟೆಯಲ್ಲಿ ಪ್ರತಿ ಕಿಲೋಗ್ರಾಂಗೆ ₹2,19,900ರಂತೆ ಮಾರಾಟವಾಗಿದೆ.

ದೆಹಲಿಯಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹1,42,720 ಹಾಗೂ 22 ಕ್ಯಾರಟ್ ಚಿನ್ನದ ಬೆಲೆ ₹1,30,840ರಷ್ಟಿದೆ. ಮುಂಬೈನಲ್ಲಿ ಕ್ರಮವಾಗಿ ₹1,42,570 ಮತ್ತು ₹1,30,690ರ ದರ ದಾಖಲಾಗಿದೆ. ಅಹಮದಾಬಾದ್‌ನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ ₹1,42,620 ಹಾಗೂ 22 ಕ್ಯಾರಟ್ ಚಿನ್ನದ ಬೆಲೆ ₹1,30,740ರಷ್ಟಿದೆ.

ಚೆನ್ನೈ ಮತ್ತು ಕೋಲ್ಕತಾದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹1,42,570 ಹಾಗೂ 22 ಕ್ಯಾರಟ್ ಚಿನ್ನದ ಬೆಲೆ ₹1,30,690ರಷ್ಟಿದೆ. ಭೋಪಾಲ್‌ನಲ್ಲಿ 24 ಕ್ಯಾರಟ್ ಚಿನ್ನ ₹1,42,620 ಮತ್ತು 22 ಕ್ಯಾರಟ್ ಚಿನ್ನ ₹1,30,740ರ ದರದಲ್ಲಿ ವಹಿವಾಟು ನಡೆಸಿದೆ.

ಜೈಪುರ ಮತ್ತು ಲಖನೌನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹1,42,720 ಹಾಗೂ 22 ಕ್ಯಾರಟ್ ಚಿನ್ನದ ಬೆಲೆ ₹1,30,840ರಷ್ಟಿದೆ. ಪಾಟ್ನಾದಲ್ಲಿ 24 ಕ್ಯಾರಟ್ ಚಿನ್ನ ₹1,42,620 ಹಾಗೂ 22 ಕ್ಯಾರಟ್ ಚಿನ್ನ ₹1,30,740ರ ದರದಲ್ಲಿ ಮಾರಾಟವಾಗಿದೆ.

ಕರ್ನಾಟಕ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳಲ್ಲಿಯೂ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಈ ರಾಜ್ಯಗಳ ರಾಜಧಾನಿಗಳಾದ ಬೆಂಗಳೂರು, ಹೈದರಾಬಾದ್ ಮತ್ತು ಭುವನೇಶ್ವರದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ ₹1,42,570 ಹಾಗೂ 22 ಕ್ಯಾರಟ್ ಚಿನ್ನದ ಬೆಲೆ ₹1,30,690ರಷ್ಟಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande