ವಿಧಾನಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಬೆಂಗಳೂರು, 26 ಅಕ್ಟೋಬರ್ (ಹಿ.ಸ.): ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಉದ್ಘಾಟಿಸಿದರು.
ಮಹರ್ಷಿ ವಾಲ್ಮೀಕಿ ಜಯಂತಿ


ಬೆಂಗಳೂರು, 26 ಅಕ್ಟೋಬರ್ (ಹಿ.ಸ.):

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಉದ್ಘಾಟಿಸಿದರು.

ಬಳಿಕ ಅವರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಡಾ. ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ, ಸಚಿವ ರಿಜ್ವಾನ್ ಅರ್ಷದ್, ಶಾಸಕರಾದ ಬಿ. ದೇವೇಂದ್ರಪ್ಪ ಮತ್ತು ರಾಜಾ ವೇಣುಗೋಪಾಲ್ ನಾಯಕ್, ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande