
ಮಂಡ್ಯ, 26 ಅಕ್ಟೋಬರ್ (ಹಿ.ಸ.):
ತೆಂಗಿನ ಮರದಲ್ಲಿ ಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಾಳಿಕೊಪ್ಪಲು ಗ್ರಾಮದ ನಿವಾಸಿ ಸಂತೋಷ್ (30) ಎಂದು ಗುರುತಿಸಲಾಗಿದೆ. ಅವರು ಅಲ್ಯೂಮಿನಿಯಂ ದೋಟಿಯ ಸಹಾಯದಿಂದ ತೆಂಗಿನಕಾಯಿ ಕೀಳುತ್ತಿದ್ದಾಗ, ಮರದ ಪಕ್ಕದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ದೋಟಿ ತಾಗಿದೆ. ಇದರಿಂದ ವಿದ್ಯುತ್ ಪ್ರವಹಿಸಿ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R