ಅಮಿತ್ ಶಾ ವಿರುದ್ಧದ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಖುಲಾಸೆ
ಲಖನೌ, 26 ಅಕ್ಟೋಬರ್ (ಹಿ.ಸ.): ಬಿಜೆಪಿ ನಾಯಕ ಅಮಿತ್ ಶಾ ಅವರ ವಿರುದ್ಧ 2018ರಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರದ ವಿಶೇಷ ಸಂಸದರು ಮತ್ತು ಶಾಸಕರ ನ್
राहुल गांधी


ಲಖನೌ, 26 ಅಕ್ಟೋಬರ್ (ಹಿ.ಸ.):

ಬಿಜೆಪಿ ನಾಯಕ ಅಮಿತ್ ಶಾ ಅವರ ವಿರುದ್ಧ 2018ರಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರದ ವಿಶೇಷ ಸಂಸದರು ಮತ್ತು ಶಾಸಕರ ನ್ಯಾಯಾಲಯ ಖುಲಾಸೆಗೊಳಿಸಿದೆ.

2018ರ ಆಗಸ್ಟ್‌ನಲ್ಲಿ ಈ ಪ್ರಕರಣ ನ್ಯಾಯಾಲಯದಲ್ಲಿ ದಾಖಲಾಗಿತ್ತು. ಅದೇ ವರ್ಷ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಆಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಅವರ ವಿರುದ್ಧ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ಸುಲ್ತಾನ್‌ಪುರದ ವಿಶೇಷ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ಖುಲಾಸೆಗೊಳಿಸಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande