
ಬೆಳಗಾವಿ, 26 ಅಕ್ಟೋಬರ್ (ಹಿ.ಸ.):
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎಸ್.ಎಸ್. ಮಲ್ಲಿಕಾರ್ಜುನ, ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಎನ್.ಎಚ್. ಕೋನರೆಡ್ಡಿ, ಆಸೀಫ್ ರಾಜು ಸೇಠ್, ಸಿ.ಎಸ್. ನಾಡಗೌಡ, ಮಹಾಂತೇಶ್ ಕೌಜಲಗಿ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.