
ಬಳ್ಳಾರಿ, 27 ಅಕ್ಟೋಬರ್ (ಹಿ.ಸ.)
ವಿವಿಧ ಬ್ಯಾಂಕಿ0ಗ್, ಎಸ್ಎಸ್ಸಿ ಹಾಗೂ ಆರ್ಆರ್ಬಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಭ್ಯರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕರಾಮುವಿ) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು 45 ದಿನಗಳ ಕಾಲ ತರಬೇತಿ ನೀಡಲು ನಿರ್ಧರಿಸಿದೆ.
ಈ ತರಬೇತಿ ಪಡೆಯಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅಕ್ಟೋಬರ್ 31ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿದೆ. ಆಸಕ್ತರು ಬೆಳಗ್ಗೆ 10 ಗಂಟೆಯಿ0ದ ಸಂಜೆ 4 ಗಂಟೆಯ ಅವಧಿಯಲ್ಲಿ ದೂರವಾಣಿ ಸಂಖ್ಯೆ 0821-2515944 ಅನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್