ನಾಲ್ಕೂ ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸ: ಪರಮೇಶ್ವರ
ಬೆಂಗಳೂರು, 27 ಅಕ್ಟೋಬರ್ (ಹಿ.ಸ.): ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ
ಡಿಸಿಎಂ ಫೈಲ್ ಪೋಟೋ


ಬೆಂಗಳೂರು, 27 ಅಕ್ಟೋಬರ್ (ಹಿ.ಸ.):

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದರು.

ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ವಲ್ಪ ಹಿನ್ನಡೆ ಅನುಭವಿಸುತ್ತಿತ್ತು. ಆದರೆ, ಈ ಬಾರಿ ಪದವೀಧರರು ಮತ್ತು ಶಿಕ್ಷಕರ ಹಲವು ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ. ಹೀಗಾಗಿ ಅವರು ಸರ್ಕಾರವನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಸಭೆಗಳನ್ನು ನಡೆಸಿದ ಸಂದರ್ಭದಲ್ಲಿಯೂ ಪದವೀಧರರು ಮತ್ತು ಶಿಕ್ಷಕರು ಸರ್ಕಾರವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande