ಕೆಎಎಸ್ ಪರೀಕ್ಷೆ ಮುಂದೂಡುವ ನಿರ್ಧಾರ ಕೆಇಎಗೆ ಬಿಟ್ಟದ್ದು: ಪರಮೇಶ್ವರ
ಬೆಂಗಳೂರು, 27 ಅಕ್ಟೋಬರ್ (ಹಿ.ಸ.): ಕರ್ನಾಟಕ ಆಡಳಿತ ಸೇವೆ ಪರೀಕ್ಷೆಗಳನ್ನು ಮುಂದೂಡಬೇಕೇ ಅಥವಾ ಬೇಡವೇ ಎಂಬುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ನಿರ್ಧರಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನ
ಡಿಸಿಎಂ ಫೈಲ್ ಪೋಟೋ


ಬೆಂಗಳೂರು, 27 ಅಕ್ಟೋಬರ್ (ಹಿ.ಸ.):

ಕರ್ನಾಟಕ ಆಡಳಿತ ಸೇವೆ ಪರೀಕ್ಷೆಗಳನ್ನು ಮುಂದೂಡಬೇಕೇ ಅಥವಾ ಬೇಡವೇ ಎಂಬುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ನಿರ್ಧರಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸ್ಪಷ್ಟಪಡಿಸಿದರು.

ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಎಎಸ್ ಪರೀಕ್ಷೆಗಳನ್ನು ಮುಂದೂಡಬೇಕು ಹಾಗೂ ಈ ಹಿಂದೆ ನಡೆದ 384 ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಕ್ರಿಯೆಯನ್ನು ಮೊದಲು ಪೂರ್ಣಗೊಳಿಸಿದ ಬಳಿಕ ಮುಂದಿನ ಪರೀಕ್ಷೆಗಳನ್ನು ನಡೆಸಬೇಕು ಎಂಬ ಅಭ್ಯರ್ಥಿಗಳ ಆಗ್ರಹದ ಕುರಿತು ಪ್ರತಿಕ್ರಿಯಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ವತಂತ್ರ ಸಂಸ್ಥೆಯಾಗಿದ್ದು, ಅದರ ಕಾರ್ಯಚಟುವಟಿಕೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು. ಈ ಕಾರಣಕ್ಕಾಗಿಯೇ ಸಂಸ್ಥೆಗೆ ಸ್ವಾಯತ್ತ ಸ್ಥಾನಮಾನ ನೀಡಲಾಗಿದೆ. ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಸಂಸ್ಥೆಯೇ ನಿರ್ಧರಿಸಲಿದೆ ಎಂದರು.

ಹಿಂದೆ ಪೊಲೀಸ್ ಇಲಾಖೆಯ ನೇಮಕಾತಿ ಪ್ರಕ್ರಿಯೆಯ ಸಂದರ್ಭದಲ್ಲಿಯೂ ಪರೀಕ್ಷೆಗಳನ್ನು ನಡೆಸುವಂತೆ ಸಂಬಂಧಪಟ್ಟ ಸಂಸ್ಥೆಗೆ ಅಭ್ಯರ್ಥಿಗಳ ಸಂಖ್ಯೆಯನ್ನು ತಿಳಿಸಿ ಮನವಿ ಮಾಡಲಾಗುತ್ತಿತ್ತು. ಆ ಪ್ರಕ್ರಿಯೆಯಲ್ಲಿಯೂ ಸರ್ಕಾರ ಹಸ್ತಕ್ಷೇಪ ಮಾಡುತ್ತಿರಲಿಲ್ಲ ಎಂದು ತಿಳಿಸಿದರು.

ಅದೇ ರೀತಿ, ಇನ್‌ಪುಟ್ ಸಬ್ಸಿಡಿ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಬ್ಸಿಡಿ ಬಿಡುಗಡೆಗೆ ಸಂಬಂಧಿಸಿದಂತೆ ಈಗಾಗಲೇ ಆದೇಶ ನೀಡಿ ಒಂದು ವಾರ ಕಳೆದಿದೆ. ಈ ಕುರಿತು ಮತ್ತೊಮ್ಮೆ ಪರಿಶೀಲನೆ ನಡೆಸಿ ಸಂಬಂಧಪಟ್ಟವರೊಂದಿಗೆ ಚರ್ಚಿಸುವುದಾಗಿ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande