ಬಳ್ಳಾರಿ: ಸುರಕ್ಷಿತ ಬಚಪನ್ ಅಭಿಯಾನಕ್ಕೆ ಚಾಲನೆ
ಬಳ್ಳಾರಿ, 27 ಅಕ್ಟೋಬರ್ (ಹಿ.ಸ.) ಅಪರಿಚಿತ ವ್ಯಕ್ತಿಗಳ ನಡವಳಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಫ್ರೆಂಡ್ ರಿಕ್ವೆಸ್ಟ್ ಮೂಲಕ ಪರಿಚಯವಾಗಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ದುರುಪಯೋಗಪಡಿಸಿಕೊಳ್ಳುವುದು ಹಾಗೂ ಬ್ಲಾಕ್ಮೇಲ್ ಮಾಡುವ ಜಾಲಗಳ ಬಗ್ಗೆ ವಿದ್ಯಾರ್ಥಿಗಳು ಸದಾ ಎಚ್ಚರದಿಂದಿರಬೇಕು ಎಂದು ಪ್ರಧಾನ ಜಿ
Bellary: ‘Safe Bachpan Campaign’ launched


Bellary: ‘Safe Bachpan Campaign’ launched


Bellary: ‘Safe Bachpan Campaign’ launched


ಬಳ್ಳಾರಿ, 27 ಅಕ್ಟೋಬರ್ (ಹಿ.ಸ.)

ಅಪರಿಚಿತ ವ್ಯಕ್ತಿಗಳ ನಡವಳಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಫ್ರೆಂಡ್ ರಿಕ್ವೆಸ್ಟ್ ಮೂಲಕ ಪರಿಚಯವಾಗಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ದುರುಪಯೋಗಪಡಿಸಿಕೊಳ್ಳುವುದು ಹಾಗೂ ಬ್ಲಾಕ್ಮೇಲ್ ಮಾಡುವ ಜಾಲಗಳ ಬಗ್ಗೆ ವಿದ್ಯಾರ್ಥಿಗಳು ಸದಾ ಎಚ್ಚರದಿಂದಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಲಿಂಗ ಪ್ರಭು ಅವರು ಹೇಳಿದರು.

ರಾಷ್ಟಿಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗದರ್ಶನದಲ್ಲಿ, ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಪೋಕ್ಸೋ ಕಾಯ್ದೆ-2012 ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 26 ರಿಂದ 31ರವರೆಗೆ ನಡೆಯುತ್ತಿರುವ ‘ಸುರಕ್ಷಿತ ಬಚಪನ್ ಅಭಿಯಾನ’ಕ್ಕೆ ನಗರದ ಕಪ್ಪಗಲ್ ರಸ್ತೆಯ ಡ್ರೀಮ್ ವರ್ಲ್ಡ್ ಶಾಲೆಯಲ್ಲಿ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ವೋಚ್ಚ ನ್ಯಾಯಾಲಯ ಹಾಗೂ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಕ್ಟೋಬರ್ ಅಂತ್ಯದವರೆಗೆ ಈ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ರಕ್ಷಣೆಗಾಗಿ ಕಾನೂನಿನಲ್ಲಿ ಸೂಕ್ತ ಅವಕಾಶಗಳಿದ್ದು, ಯಾವುದೇ ತೊಂದರೆ ಅಥವಾ ತುರ್ತು ಸಂದರ್ಭದಲ್ಲಿ ನೆರವು ಪಡೆಯಲು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಬಳಸುವಂತೆ ಸಲಹೆ ನೀಡಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರು ಮಾತನಾಡಿ, ‘ನಿಮ್ಮ ದೇಹ ನಿಮ್ಮ ಹಕ್ಕು’ ಯಾವುದೇ ರೀತಿಯ ಕಿರುಕುಳ ಅಥವಾ ಅಹಿತಕರ ಘಟನೆಗಳು ಸಂಭವಿಸಿದಾಗ ಭಯಪಡದೆ ಧೈರ್ಯವಾಗಿ ಎದುರಿಸಬೇಕು ಹಾಗೂ ಅಧಿಕಾರಿಗಳಿಗೆ ಅಥವಾ ಪಾಲಕರಿಗೆ ಮಾಹಿತಿ ನೀಡಿ ದೂರು ದಾಖಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗ ಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಂದಿನಿ ಶಿಂಧೆ ಹಾಗೂ ಡ್ರೀಮ್ ವರ್ಲ್ಡ್ ಶಾಲೆಯ ಪ್ರಾಂಶುಪಾಲರಾದ ಪರಿಮಳ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande