ಬಳ್ಳಾರಿ: ಮಕ್ಕಳ ರಕ್ಷಣೆ ಹಾಗೂ ಸಂವಿಧಾನದ ಅರಿವು ನಾಗರಿಕನ ಕರ್ತವ್ಯ
ಬಳ್ಳಾರಿ, 28 ಅಕ್ಟೋಬರ್ (ಹಿ.ಸ.) ಮಕ್ಕಳೇ ದೇಶದ ಭವಿಷ್ಯವಾಗಿದ್ದು, ಸದೃಢ ದೇಶ ನಿರ್ಮಾಣಕ್ಕೆ ಮಕ್ಕಳ ಬಾಲ್ಯಾವಸ್ಥೆಯ ರಕ್ಷಣೆ ಮತ್ತು ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿ.ಜೆ.ಎಮ್. ಇಬ್ರಾಹೀಂ ಎಮ್. ಮುಜಾವರ್ ಅವರು ಹೇಳಿದರು. ನಗರದ ಕಪ್ಪಗಲ್ ರಸ್ತೆಯ
Constitution are the duties of citizens


Constitution are the duties of citizens


Constitution are the duties of citizens


Constitution are the duties of citizens


ಬಳ್ಳಾರಿ, 28 ಅಕ್ಟೋಬರ್ (ಹಿ.ಸ.)

ಮಕ್ಕಳೇ ದೇಶದ ಭವಿಷ್ಯವಾಗಿದ್ದು, ಸದೃಢ ದೇಶ ನಿರ್ಮಾಣಕ್ಕೆ ಮಕ್ಕಳ ಬಾಲ್ಯಾವಸ್ಥೆಯ ರಕ್ಷಣೆ ಮತ್ತು ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿ.ಜೆ.ಎಮ್. ಇಬ್ರಾಹೀಂ ಎಮ್. ಮುಜಾವರ್ ಅವರು ಹೇಳಿದರು.

ನಗರದ ಕಪ್ಪಗಲ್ ರಸ್ತೆಯಲ್ಲಿರುವ ಸತ್ಯಂ ಇಂಟರ್ ನ್ಯಾಷನಲ್ ಶಾಲೆಯಲ್ಲಿ ರಾಷ್ಟಿಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಳ್ಳಾರಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಸುರಕ್ಷಿತ ಬಚಪನ್ ಅಭಿಯಾನ’ದ ಅಂಗವಾಗಿ ಶಾಲಾ-ಕಾಲೇಜು ಮಕ್ಕಳಿಗೆ 2012ರ ಕಾಯ್ದೆ ಕುರಿತು ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನ ನೀಡಿರುವ ಹಕ್ಕುಗಳಷ್ಟೇ ಕರ್ತವ್ಯಗಳೂ ಮುಖ್ಯ. ಸಂವಿಧಾನ, ರಾಷ್ಟçಧ್ವಜ ಮತ್ತು ರಾಷ್ಟçಗೀತೆಯನ್ನು ಗೌರವಿಸುವುದು, ಸ್ವಾತಂತ್ರö್ಯ ಹೋರಾಟಗಾರರ ಆದರ್ಶಗಳನ್ನು ಪಾಲಿಸುವುದು, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು, ಸಾರ್ವಜನಿಕ ಆಸ್ತಿ ರಕ್ಷಣೆ, ಮಹಿಳೆಯರಿಗೆ ಗೌರವ ನೀಡುವುದು ಮತ್ತು 14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬರ ಪ್ರಮುಖ ಕರ್ತವ್ಯವಾಗಿದೆ. ಪರಸ್ಪರ ಸಹೋದರತ್ವದ ಭಾವನೆಯನ್ನು ಬೆಳೆಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

ಪ್ರಜಾಪ್ರಭುತ್ವದಲ್ಲಿ ಯಾವುದೇ ವ್ಯಕ್ತಿಗಿಂತ ಕಾನೂನೇ ದೊಡ್ಡದು. ಮಕ್ಕಳ ಮತ್ತು ಮಹಿಳೆಯರ ರಕ್ಷಣೆಗಾಗಿ ಇರುವ ಪ್ರಮುಖ ಕಾನೂನುಗಳಾದ ಪೋಕ್ಸೋ ಕಾಯ್ದೆ 2012, ಭ್ರೂಣ ಲಿಂಗ ಪತ್ತೆ ನಿಷೇಧ, ಬಾಲಕಾರ್ಮಿಕ ನಿಷೇಧ, ಬಾಲ್ಯ ವಿವಾಹ ನಿಷೇಧ ಕಾಯ್ದೆಗಳ ಬಗ್ಗೆ ಅರಿವು ಹೊಂದಬೇಕು ಎಂದು ತಿಳಿಸಿದರು.

ಮಕ್ಕಳು ಶಾಲೆಯಲ್ಲಿ ಅಥವಾ ಹೊರಗಡೆ ನಡೆಯುವ ಪ್ರತಿಯೊಂದು ವಿಚಾರವನ್ನು ಪೋಷಕರೊಂದಿಗೆ ಮುಕ್ತವಾಗಿ ಹಂಚಿಕೊಳ್ಳುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ ಅವರು, ಅದೇ ರೀತಿ ಪೋಷಕರೂ ಕೂಡ ಮಕ್ಕಳೊಂದಿಗೆ ದಿನಕ್ಕೆ ಕನಿಷ್ಠ ಕೆಲ ಸಮಯವನ್ನು ಮೀಸಲಿಟ್ಟು, ಅವರೊಂದಿಗೆ ಮುಕ್ತವಾಗಿ ಮಾತನಾಡಿ, ಅವರ ರಕ್ಷಣೆಗೆ ಸದಾ ಬೆನ್ನೆಲುಬಾಗಿ ನಿಲ್ಲಬೇಕೆಂದು ಕರೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆದ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಮಾತನಾಡಿ, ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳು ಸುಲಭವಾಗಿ ಶೋಷಣೆಗೆ ಒಳಗಾಗುವ ಪರಿಸ್ಥಿತಿ ಹೆಚ್ಚುತ್ತಿರುವುದರಿಂದ, ಅವರ ರಕ್ಷಣೆಗಾಗಿ ರೂಪಿಸಲಾಗಿರುವ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅತ್ಯಗತ್ಯ ಎಂದು ಹೇಳಿದರು.

‘ಸುರಕ್ಷಿತ ಬಚಪನ್ ಅಭಿಯಾನ’ವು ಜಿಲ್ಲೆಯಲ್ಲಿ ಅಕ್ಟೋಬರ್ 31 ರವರೆಗೆ ನಡೆಯುತ್ತಿದ್ದು, ‘ಜಾಗೃತಿ, ಸುರಕ್ಷತೆ ಮತ್ತು ರಕ್ಷಣೆ ಪ್ರತಿಯೊಂದು ಮಗುವಿನ ಹಕ್ಕು - ಪ್ರತಿ ಮಗುವಿನ ಬಾಲ್ಯಕ್ಕೆ ನಾವೆಲ್ಲರೂ ಜವಾಬ್ದಾರರು’ ಎಂಬ ಧ್ಯೇಯದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಹಾಗೂ ವಕೀಲರಾದ ತ್ರಿವೇಣಿ ಪತ್ತಾರ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ಕಾಲ ಹೋಗಿ, ಇಂದಿನ ಮಕ್ಕಳೇ ಇಂದಿನ ಪ್ರಜೆಗಳಾಗಿದ್ದಾರೆ. ದೇಶದ ಅಮೂಲ್ಯ ಸಂಪತ್ತಾಗಿರುವ ಮಕ್ಕಳಿಗೆ ಸುರಕ್ಷಿತ ಬಾಲ್ಯ ಹಾಗೂ ಗೌರವಯುತ ಜೀವನ ಒದಗಿಸುವುದು ಇಡೀ ಸಮಾಜದ ಜವಾಬ್ದಾರಿಯಾಗಿದೆ. ಶಾಲೆ, ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ಪೋಷಕರು, ಶಿಕ್ಷಕರು ಮತ್ತು ಸಾರ್ವಜನಿಕರು ಒಟ್ಟಾಗಿ ಶ್ರಮಿಸಬೇಕು ಎಂದು ತಿಳಿಸಿದರು.

ಮಕ್ಕಳು ‘ಸೇಫ್ ಟಚ್' (ಸುರಕ್ಷಿತ ಸ್ಪರ್ಶ) ಮತ್ತು ‘ಅನ್ಸೇಫ್ ಟಚ್' (ಅಸುರಕ್ಷಿತ ಸ್ಪರ್ಶ) ನಡುವಿನ ವ್ಯತ್ಯಾಸವನ್ನು ತಿಳಿದುಕೊಳ್ಳಬೇಕು. ಯಾರಾದರೂ ಅಸಹಜವಾಗಿ ಅಥವಾ ಖಾಸಗಿ ಅಂಗಗಳನ್ನು ಮುಟ್ಟಿದಾಗ ಭಯಪಡದೆ ತಕ್ಷಣ ಧ್ವನಿ ಎತ್ತಬೇಕು. ಲೈಂಗಿಕ ದೌರ್ಜನ್ಯ ಅಥವಾ ಅನುಮಾನಾಸ್ಪದ ನಡವಳಿಕೆಗಳು ಕಂಡುಬಂದಾಗ ಯಾವುದೇ ಮುಜುಗರವಿಲ್ಲದೆ ತಕ್ಷಣ ಶಿಕ್ಷಕರಿಗೆ, ಪೋಷಕರಿಗೆ ಅಥವಾ ಹಿರಿಯರಿಗೆ ತಿಳಿಸಬೇಕು ಎಂದರು.

ವಿಶೇಷ ಮಕ್ಕಳ ಪೊಲೀಸ್ ಘಟಕದ ಲಲಿತಮ್ಮ ಅವರು ಮಾತನಾಡಿ, ಆಪತ್ತಿನಲ್ಲಿರುವ ಮಕ್ಕಳು ಅಥವಾ ಸಾರ್ವಜನಿಕರು ತಕ್ಷಣ ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ 1098 ಅಥವಾ ತುರ್ತು ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ದೌರ್ಜನ್ಯ ನಡೆದ ನಂತರ ಕಾನೂನು ಕ್ರಮ ಕೈಗೊಳ್ಳುವುದಕ್ಕಿಂತ ಮುಂಚಿತವಾಗಿಯೇ ಮುನ್ನೆಚ್ಚರಿಕೆ ವಹಿಸುವುದು ಮುಖ್ಯವಾಗಿದ್ದು, ಮಕ್ಕಳು ತಮ್ಮ ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ ಸದಾ ಜಾಗೃತರಾಗಿರಬೇಕು. ಮುಖ್ಯವಾಗಿ ಮಕ್ಕಳು ಹಿರಿಯರನ್ನು ಗೌರವಿಸಬೇಕು. ಸಾಮಾಜಿಕ ಜಾಲತಾಣಗಳಿಂದ ದೂರವಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್ ಎಮ್., ಬಳ್ಳಾರಿ ನಗರ ಡಿ.ವೈ.ಎಸ್.ಪಿ ಹಾಗೂ ವಿಶೇಷ ಮಕ್ಕಳ ಪೊಲೀಸ್ ಘಟಕದ ಅಧಿಕಾರಿ ಗೋವಿಂದ್ ರಾಜು, ಪಶ್ಚಿಮ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗ ಮೂರ್ತಿ ಟಿ.ಎಮ್. ಹಾಗೂ ಶಾಲೆಯ ಪ್ರಾಂಶುಪಾಲರಾದ ಭಾವನಾ ಪ್ರಸಾದ್ ಸೇರಿದಂತೆ ಶಾಲಾ ಆಡಳಿತ ಮಂಡಳಿ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande