ಪರಿಷತ್ ಚುನಾವಣೆ ಫಲಿತಾಂಶದ ಸಂದೇಶವನ್ನು ಕೂಲಂಕಷವಾಗಿ ಅಧ್ಯಯನ: ಡಿ.ಕೆ. ಶಿವಕುಮಾರ್
ಬೆಂಗಳೂರು, 28 ಅಕ್ಟೋಬರ್ (ಹಿ.ಸ.): ವಿಧಾನ ಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಚುನಾವಣೆಯ ಫಲಿತಾಂಶದ ಸಂದೇಶವನ್ನು ಕೂಲಂಕಷವಾಗಿ ಅಧ್ಯಯನ ಮಾಡಿ, ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್
ಮಾಧ್ಯಮಗಳಿಗೆ ಮಾತನಾಡಿದ ಸಿಎಂ


ಬೆಂಗಳೂರು, 28 ಅಕ್ಟೋಬರ್ (ಹಿ.ಸ.):

ವಿಧಾನ ಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಚುನಾವಣೆಯ ಫಲಿತಾಂಶದ ಸಂದೇಶವನ್ನು ಕೂಲಂಕಷವಾಗಿ ಅಧ್ಯಯನ ಮಾಡಿ, ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಎರಡು ಸ್ಥಾನಗಳು ಲಭಿಸುವ ನಿರೀಕ್ಷೆ ಇತ್ತು. ಆದರೆ ಅದು ಸಾಧ್ಯವಾಗಿಲ್ಲ. ಪಕ್ಷ ಸೋತಿದ್ದರೂ ಉತ್ತಮ ಮತಗಳು ಬಂದಿವೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶವನ್ನು ನಿರೀಕ್ಷಿಸಿರಲಿಲ್ಲ. ಈ ಕುರಿತು ಪರಿಶೀಲನೆ ನಡೆಸಲಾಗುವುದು ಎಂದರು.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಫಲಿತಾಂಶವನ್ನು ಭವಿಷ್ಯದ ಚುನಾವಣೆಯ ಮುನ್ಸೂಚನೆ ಎಂದು ಹೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರಗಳ ಫಲಿತಾಂಶಗಳ ಬಗ್ಗೆಯೂ ಅವರು ಉತ್ತರಿಸಬೇಕು. ಅವುಗಳನ್ನೂ ಮುನ್ಸೂಚನೆ ಎಂದು ಪರಿಗಣಿಸುತ್ತಾರೆಯೇ ಎಂದು ಪ್ರಶ್ನಿಸಿದರು.

ಚುನಾವಣೆಯ ಫಲಿತಾಂಶದಿಂದ ಕಲಿಯಬೇಕಾದ ಹಲವು ವಿಚಾರಗಳಿವೆ. ಅವುಗಳನ್ನು ಪರಿಶೀಲಿಸಿ, ಪಕ್ಷದ ಕಾರ್ಯಕರ್ತರನ್ನು ಹೇಗೆ ಸಜ್ಜುಗೊಳಿಸಬೇಕು ಎಂಬುದು ನಮಗೆ ತಿಳಿದಿದೆ ಎಂದು ಹೇಳಿದರು.

ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆ ಮತಪತ್ರಗಳ ಮೂಲಕ ನಡೆದಿದ್ದರೂ ಕಾಂಗ್ರೆಸ್ ಸೋತಿರುವುದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಮತಪತ್ರದ ಮೂಲಕ ಚುನಾವಣೆ ನಡೆಸುವ ಅಗತ್ಯವಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಹಲವು ಸಮಸ್ಯೆಗಳಿದ್ದು, ನವೆಂಬರ್ ನಂತರ ಈ ಕುರಿತು ಪಕ್ಷದ ವತಿಯಿಂದ ಹೊಸ ಕ್ರಿಯಾ ಯೋಜನೆ ಪ್ರಕಟಿಸಲಾಗುವುದು ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande