ನವೆಂಬರ್ 1 - ಬಳ್ಳಾರಿಯಲ್ಲಿ ‘ಗ್ರಾಮಾನುಭವ'ಕ್ಕೆ ಚಾಲನೆ
ಬಳ್ಳಾರಿ, 31 ಅಕ್ಟೋಬರ್ (ಹಿ.ಸ.) ಬಳ್ಳಾರಿ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕು, ಕೃಷಿ ಚಟುವಟಿಕೆಗಳು ಹಾಗೂ ಸಂಸ್ಕೃತಿಯ ಪ್ರಾಯೋಗಿಕ ಪರಿಚಯ ಮಾಡಿಕೊಡುವ ಉದ್ದೇಶದಿಂದ ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಯೋಜನಾ ಕಚೇರಿ ವತಿಯಿಂದ ‘ಗ್ರಾಮಾನುಭವ'' ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್
ನವೆಂಬರ್ 1 - ಬಳ್ಳಾರಿಯಲ್ಲಿ ‘ಗ್ರಾಮಾನುಭವ'ಕ್ಕೆ ಚಾಲನೆ


ಬಳ್ಳಾರಿ, 31 ಅಕ್ಟೋಬರ್ (ಹಿ.ಸ.)

ಬಳ್ಳಾರಿ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕು, ಕೃಷಿ ಚಟುವಟಿಕೆಗಳು ಹಾಗೂ ಸಂಸ್ಕೃತಿಯ ಪ್ರಾಯೋಗಿಕ ಪರಿಚಯ ಮಾಡಿಕೊಡುವ ಉದ್ದೇಶದಿಂದ ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಯೋಜನಾ ಕಚೇರಿ ವತಿಯಿಂದ ‘ಗ್ರಾಮಾನುಭವ' ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನವೆಂಬರ್ 01 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ (ಮುನ್ಸಿಪಲ್) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವಸತಿ ಸಚಿವರಾದ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

*ಕಾರ್ಯಕ್ರಮದ ಉದ್ದೇಶ:*

ನಗರ ಪ್ರದೇಶದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ 8, 9 ಮತ್ತು 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಹಾಗೂ ಗ್ರಾಮೀಣ ಕಲೆ ಮತ್ತು ಸಂಸ್ಕೃತಿಯ ನೇರ ಮತ್ತು ನೈಜ ಅನುಭವವನ್ನು ಒದಗಿಸುವುದು ಪ್ರಮುಖ ಗುರಿಯಾಗಿದೆ.

ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಜೀವನದ ಬಗ್ಗೆ ಅರಿವು ಹಾಗೂ ಪ್ರಾಯೋಗಿಕ ಜ್ಞಾನ ಮೂಡಿಸಲು ಈ ವಿನೂತನ ಯೋಜನೆ ಸಹಕಾರಿಯಾಗಲಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಯೋಜನಾ ಕಚೇರಿಯ ಸಮನ್ವಯಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande