ಇಂದಿರಾ ಗಾಂಧಿ ಪುಣ್ಯಸ್ಮರಣೆ, ಸರ್ದಾರ್ ಪಟೇಲ್ ಜನ್ಮದಿನ: ಡಿಕೆಶಿ ಪುಷ್ಪನಮನ
ಬೆಂಗಳೂರು, 31 ಅಕ್ಟೋಬರ್ (ಹಿ.ಸ.): ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಭಯ ನಾಯಕ
ಇಂದಿರಾ ಗಾಂಧಿ ಪುಣ್ಯಸ್ಮರಣೆ, ಸರ್ದಾರ್ ಪಟೇಲ್ ಜನ್ಮದಿನ: ಡಿಕೆಶಿ ಪುಷ್ಪನಮನ


ಬೆಂಗಳೂರು, 31 ಅಕ್ಟೋಬರ್ (ಹಿ.ಸ.):

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಭಯ ನಾಯಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವರಾದ ಚಲುವರಾಯಸ್ವಾಮಿ, ಕೆ.ಎಚ್. ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್, ಮಾಜಿ ಸಚಿವೆ ರಾಣಿ ಸತೀಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande