ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವದಿ ವಿಸ್ತರಣೆ
ಬಳ್ಳಾರಿ, 31 ಅಕ್ಟೋಬರ್ (ಹಿ.ಸ.) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಪಿಯುಸಿ ಹೊರತುಪಡಿಸಿ ಇನ್ನುಳಿದ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು
ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವದಿ ವಿಸ್ತರಣೆ


ಬಳ್ಳಾರಿ, 31 ಅಕ್ಟೋಬರ್ (ಹಿ.ಸ.)

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಪಿಯುಸಿ ಹೊರತುಪಡಿಸಿ ಇನ್ನುಳಿದ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ‘ಶುಲ್ಕ ಮರುಪಾವತಿ' ಮತ್ತು ‘ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ'ಯ ಸೌಲಭ್ಯಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಈ ವಿಸ್ತರಿತ ದಿನಾಂಕದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande