ಜ್ಞಾನಭಾರತಿ ವ್ಯಾಪ್ತಿಯಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆ; ಸ್ಥಳೀಯರಲ್ಲಿ ಆತಂಕ
ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಸೋಣೆಹಳ್ಳಿ ಸರ್ಕಲ್ ಸಮೀಪದ ಖಾಲಿ ಜಾಗದಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತು ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
Suspicious-Explosive-Like-Object-Found-Near-Sonehalli-Circle-Bengaluru


ಬೆಂಗಳೂರು, 31 ಅಕ್ಟೋಬರ್ (ಹಿ.ಸ.):

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಫೋಟಕ ಮಾದರಿಯ ಅನುಮಾನಾಸ್ಪದ ವಸ್ತುವೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಜ್ಞಾನಭಾರತಿಯ ಸೋಣೆಹಳ್ಳಿ ಸರ್ಕಲ್ ಸಮೀಪದ ಖಾಲಿ ಜಾಗವೊಂದರಲ್ಲಿ ಈ ವಸ್ತು ಪತ್ತೆಯಾಗಿದೆ. ಬಾಂಬ್ ಮಾದರಿಯ ವಸ್ತು ಕಂಡು ಸ್ಥಳೀಯರು ಆತಂಕಗೊಂಡಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನಭಾರತಿ ಠಾಣೆಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತ್ತೆಯಾಗಿರುವ ವಸ್ತುವಿನ ಸ್ವರೂಪ ಹಾಗೂ ಅದರಲ್ಲಿರುವ ಸ್ಫೋಟಕ ಅಂಶಗಳ ಕುರಿತು ಪರಿಶೀಲನೆ ಮುಂದುವರಿದಿದೆ.

ಕನ್ನಡ ರಾಜ್ಯೋತ್ಸವದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಇಂತಹ ಅನುಮಾನಾಸ್ಪದ ವಸ್ತು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ವಸ್ತುವಿನ ಮೂಲ ಮತ್ತು ಅದರ ಉದ್ದೇಶದ ಬಗ್ಗೆ ಪೊಲೀಸರ ತನಿಖೆಯ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಪೊಲೀಸರ ಪರಿಶೀಲನೆ ಮುಂದುವರಿದಿದ್ದು, ವಸ್ತುವಿನ ಬಗ್ಗೆ ಅಧಿಕೃತ ಸ್ಪಷ್ಟನೆ ನಿರೀಕ್ಷಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande