ಬಳ್ಳಾರಿ ಜೆಸ್ಕಾಂ : ಅ.5, 6, 7ರಂದು ಸೇವಾ ಸೇತು ಶಿಬಿರ
ಬಳ್ಳಾರಿ, 04 ಅಕ್ಟೋಬರ್ (ಹಿ.ಸ.) ಜೆಸ್ಕಾಂ ವ್ಯಾಪ್ತಿಯ ಕಲಬುರಗಿ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳ ಉಪವಿಭಾಗ ಕಚೇರಿಗಳಲ್ಲಿ ಅಕ್ಟೋಬರ್ 5, 6 ಮತ್ತು 7ರಂದು ‘ಸೇವಾ ಸೇತು ಶಿಬಿರ’ಗಳನ್ನು ಆಯೋಜಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಹೊಸ ಮತ
ಬಳ್ಳಾರಿ ಜೆಸ್ಕಾಂ : ಅ.5, 6, 7ರಂದು ಸೇವಾ ಸೇತು ಶಿಬಿರ


ಬಳ್ಳಾರಿ, 04 ಅಕ್ಟೋಬರ್ (ಹಿ.ಸ.)

ಜೆಸ್ಕಾಂ ವ್ಯಾಪ್ತಿಯ ಕಲಬುರಗಿ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳ ಉಪವಿಭಾಗ ಕಚೇರಿಗಳಲ್ಲಿ ಅಕ್ಟೋಬರ್ 5, 6 ಮತ್ತು 7ರಂದು ‘ಸೇವಾ ಸೇತು ಶಿಬಿರ’ಗಳನ್ನು ಆಯೋಜಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ (MNRE) ನಿರ್ದೇಶನದಂತೆ, ಪ್ರಧಾನಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯೋಜನೆಯ ಪ್ರಯೋಜನಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ದೇಶಾದ್ಯಂತ ಸೇವಾ ಸೇತು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

ಇದರ ಭಾಗವಾಗಿ ಜೆಸ್ಕಾಂ ವ್ಯಾಪ್ತಿಯ ಏಳು ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳ ಉಪವಿಭಾಗ ಕಚೇರಿಗಳಲ್ಲಿ ಶಿಬಿರಗಳು ನಡೆಯಲಿವೆ. ಸಾರ್ವಜನಿಕರು ಶಿಬಿರಗಳಲ್ಲಿ ಭಾಗವಹಿಸಿ ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಯ ಮಾಹಿತಿ ಪಡೆದು, ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಜೆಸ್ಕಾಂ ಕೋರಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande