ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆ ಬಲಪಡಿಸಲು ಸಚಿವ ಯತೀಂದ್ರ ಕರೆ
ಮೈಸೂರು, 04 ಅಕ್ಟೋಬರ್ (ಹಿ.ಸ.): ನಗರದ ರಿಂಗ್ ರಸ್ತೆಯ ಭಾನವಿ ಪ್ಯಾಲೇಸ್‌ನಲ್ಲಿ ನಡೆದ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿ
ಪದಗ್ರಹಣ ಸಮಾರಂಭ


ಮೈಸೂರು, 04 ಅಕ್ಟೋಬರ್ (ಹಿ.ಸ.):

ನಗರದ ರಿಂಗ್ ರಸ್ತೆಯ ಭಾನವಿ ಪ್ಯಾಲೇಸ್‌ನಲ್ಲಿ ನಡೆದ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿದರು.

ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೀರಿಹುಂಡಿ ಬಸವಣ್ಣ ಅವರಿಗೆ ಯತೀಂದ್ರ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಬೀರಿಹುಂಡಿ ಬಸವಣ್ಣ ಅವರು ತಳಮಟ್ಟದಿಂದ ಬೆಳೆದು ಬಂದ ಧುರೀಣರಾಗಿದ್ದು, ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಒಮ್ಮೆ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಜನರ ಸಮಸ್ಯೆಗಳನ್ನು ಹತ್ತಿರದಿಂದ ಕಂಡಿರುವ ಬೀರಿಹುಂಡಿ ಬಸವಣ್ಣ ಅವರು ಪ್ರಜಾಪ್ರಭುತ್ವ, ಜಾತ್ಯತೀತತೆ, ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಒಳಗೊಂಡು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇದೇ ವೇಳೆ, ಕಳೆದ 13 ವರ್ಷಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ನಿಕಟಪೂರ್ವ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಡಾ. ಬಿ.ಜೆ. ವಿಜಯ್ ಕುಮಾರ್ ಅವರ ಸೇವೆಯನ್ನು ಶ್ಲಾಘಿಸಿ, ಧನ್ಯವಾದ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ವೆಂಕಟೇಶ್, ಡಿ. ರವಿಶಂಕರ್, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಶಿವಕುಮಾರ್, ಮಾಜಿ ಶಾಸಕರಾದ ಎಂ.ಕೆ. ಸೋಮಶೇಖರ್, ಹೆಚ್.ಪಿ. ಮಂಜುನಾಥ್ ಸೇರಿದಂತೆ ಮಾಜಿ ಶಾಸಕರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande