ಅ.07 : ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಬಳ್ಳಾರಿ ಬರ ಸಮೀಕ್ಷೆ ಪ್ರವಾಸ
ಬಳ್ಳಾರಿ, 06 ಅಕ್ಟೋಬರ್ (ಹಿ.ಸ.) ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು, ಅಕ್ಟೋಬರ್ 07 ರಂದು ಬಳ್ಳಾರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರ ಸಮೀಕ್ಷೆ ಪ್ರವಾಸ ಕೈಗೊಳ್ಳಲಿದ್ದಾರೆ. ಜಿಲ್ಲೆಯ ಹಲವೆಡೆ ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳನ್ನು ಖುದ್ದಾಗಿ ಪರಿಶೀಲಿಸಿ, ರೈತರ
ಅ.07 : ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಬಳ್ಳಾರಿ ಬರ ಸಮೀಕ್ಷೆ ಪ್ರವಾಸ


ಬಳ್ಳಾರಿ, 06 ಅಕ್ಟೋಬರ್ (ಹಿ.ಸ.)

ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು, ಅಕ್ಟೋಬರ್ 07 ರಂದು ಬಳ್ಳಾರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರ ಸಮೀಕ್ಷೆ ಪ್ರವಾಸ ಕೈಗೊಳ್ಳಲಿದ್ದಾರೆ. ಜಿಲ್ಲೆಯ ಹಲವೆಡೆ ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳನ್ನು ಖುದ್ದಾಗಿ ಪರಿಶೀಲಿಸಿ, ರೈತರ ಅಹವಾಲುಗಳನ್ನು ಆಲಿಸಲಿದ್ದಾರೆ.

ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದಲ್ಲಿ ಬರದಿಂದ ಒಣಗುತ್ತಿರುವ ತೊಗರಿ ಬೆಳೆ, ಬಿ.ಬೆಳಗಲ್ ಗ್ರಾಮದಲ್ಲಿ ಬರಪೀಡಿತ ತೊಗರಿ ಮತ್ತು ಸಜ್ಜೆ ಬೆಳೆಗಳ ವೀಕ್ಷಣೆ ನಡೆಸಲಿದ್ದಾರೆ.

ನಂತರ ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದಲ್ಲಿ ಬರದಿಂದ ಹಾನಿಗೊಳಗಾಗಿರುವ ಮೆಕ್ಕೆಜೋಳ ಮತ್ತು ತೊಗರಿ ಬೆಳೆಗಳ ಕ್ಷೇತ್ರ ಸಮೀಕ್ಷೆ ಮಾಡುವರು.

ಬಳಿಕ ಸಂಜೆ, ವಿಜಯನಗರ ಜಿಲ್ಲೆಗೆ ತೆರಳಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande