ಮೈಸೂರು ದಸರಾ: ಅ.೧೭ರಂದು ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಿಗೆ ಟಾಂಗಾ ಸವಾರಿ
ಮೈಸೂರು, 06 ಅಕ್ಟೋಬರ್ (ಹಿ.ಸ.): ಮೈಸೂರು ದಸರಾ 2026ರ ಅಂಗವಾಗಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಿಗಾಗಿ ವಿಶೇಷ ಪಾರಂಪರಿಕ ಟಾಂಗಾ ಸವಾರಿಯನ್ನು ಆಯೋಜಿಸಲಾಗಿದೆ. ಅಕ್ಟೋಬರ್ 17ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಖ್ಯಾತ ನಟಿ ಶ್ರೀಮತಿ ಅಕ್ಷ
ಕಾರ್ಯಕ್ರಮದ ಮಾಹಿತಿ ಪತ್ರ


ಮೈಸೂರು, 06 ಅಕ್ಟೋಬರ್ (ಹಿ.ಸ.):

ಮೈಸೂರು ದಸರಾ 2026ರ ಅಂಗವಾಗಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಿಗಾಗಿ ವಿಶೇಷ ಪಾರಂಪರಿಕ ಟಾಂಗಾ ಸವಾರಿಯನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 17ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಖ್ಯಾತ ನಟಿ ಶ್ರೀಮತಿ ಅಕ್ಷತಾ ಪಾಂಡವಪುರ ಅವರು ಚಾಲನೆ ನೀಡಲಿದ್ದಾರೆ.

ಮೈಸೂರಿನ ಐತಿಹಾಸಿಕ ಪರಂಪರೆ, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಸಾರಿಗೆ ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಾರಂಪರಿಕ ಉಡುಗೆಯಲ್ಲಿ ದಂಪತಿಗಳು ಟಾಂಗಾ ಸವಾರಿಯ ಮೂಲಕ ಮೈಸೂರಿನ ಸಾಂಸ್ಕೃತಿಕ ವೈಭವವನ್ನು ಅನುಭವಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande